11:37 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹಣ ನೀಡುವ ಕಾಮಧೇನು: ಐಶ್ವರ್ಯ ಅನಂತಕುಮಾರ್ ಕಿಡಿ

20/03/2026, 23:03

ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ‘ಕ್ಯಾಶ್ ಕೌ’ ಅಥವಾ ‘ಹಣವನ್ನು ಕೊಡುವ ಕಾಮಧೇನು’ ಮಾಡಿಕೊಂಡಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ದಿವಂಗತ ಬಿಜೆಪಿ ನಾಯಕ ಅನಂತ ಕುಮಾರ್ ಅವರ ಪುತ್ರಿ ಐಶ್ವರ್ಯಾ ಅನಂತ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಶ್ವರ್ಯ ಅನಂತ್ ಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ‘ಮತ್ತೆ ಅದೇ ಕಥೆ ಶುರುವಾಗಿದೆ.
ಮುಂಬರುವ ಅಸ್ಸಾಂ ಚುನಾವಣೆಯ ರಾಜಕೀಯ ಪ್ರಚಾರಗಳಿಗೆ ಹಣ ಒದಗಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಕರ್ನಾಟಕವನ್ನು ‘ನಗದು ಹಸು’ ಆಗಿ ಬಳಸಿಕೊಳ್ಳಲು ತಂತ್ರ ಹೂಡುತ್ತಿದೆ’ ಎಂದು ನೇರವಾಗಿ ಆರೋಪಿಸಿದ್ದಾರೆ.
ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಅನಂತ್ ಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಹಣಕಾಸಿನ ಆರೋಪ ಮಾಡುವ ಮೂಲಕ ರಾಜಕೀಯ ಸಂಚಲನ ಸೃಷ್ಟಿಸಿದ್ದಾರೆ. ನಮ್ಮ ರಾಜ್ಯ ಸಾಲದ ಸುಳಿಗೆ ಸಿಲುಕಿದ್ದರೂ, ಡಿ.ಕೆ. ಶಿವಕುಮಾರ್ ಅವರೇ ಕಾಂಗ್ರೆಸ್ ಹೈಕಮಾಂಡ್‌ಗೆ ನೀವೇಕೆ ಹಣ ನೀಡುವ ಪಾತ್ರವನ್ನು ನಿರ್ವಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ‘ಡಿ.ಕೆ. ಶಿವಕುಮಾರ್ ಸರ್, ಕರ್ನಾಟಕಕ್ಕೆ ನಿಮ್ಮ ನಿಷ್ಠೆ ಎಲ್ಲಕ್ಕಿಂತ ಮಿಗಿಲು ಎಂದು ನೀವು ಪದೇ ಪದೇ ಹೇಳುತ್ತಿರುತ್ತೀರಿ. ಹಾಗಿರುವಾಗ, ರಾಜ್ಯವು ಭಾರಿ ಸಾಲದ ಸುಳಿಯಲ್ಲಿ ಸಿಲುಕಿರುವಾಗ ಕಾಂಗ್ರೆಸ್ ಹೈಕಮಾಂಡ್‌ಗಾಗಿ ನೀವು ಈ ಪಾತ್ರವನ್ನು (ಹಣ ಒದಗಿಸುವ ಪಾತ್ರ) ಏಕೆ ನಿರ್ವಹಿಸುತ್ತಿದ್ದೀರಿ?’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿರುವ ಐಶ್ವರ್ಯ, ಅವರ ನಿಷ್ಠೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು