2:18 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ; ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದ ಸತಿ

15/09/2025, 10:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕ ಹೆಜ್ಜೂರು ಗ್ರಾಮದ ನಿವಾಸಿ ವೆಂಕಟಸ್ವಾಮಿ ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಪತ್ನಿ ಸಲ್ಲಾಪುರಿ ಎಂಬಾಕೆಯೇ ತನ್ನ ಗಂಡ ವೆಂಕಟಸ್ವಾಮಿಯನ್ನ ಹತ್ಯೆಗೈದು ನಂತರ ಹುಲಿ ಕೊಂದಿದೆ ಎಂದು ನಾಟಕವಾಗಿ ಇದೀಗ ಸಿಕ್ಕಿಬಿದ್ದಿದ್ದಾಳೆ. ಕಳೆದ ಕೆಲ ವರ್ಷಗಳಿಂದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಸಣ್ಣ ಮನೆಯೊಂದನ್ನು ಕಟ್ಟಿಕೊಂಡು ದಂಪತಿ ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ಪೊಲೀಸರಿಗೆ ದೂರು ನೀಡಿದ್ದಳು. ಅಷ್ಟೇ ಅಲ್ಲದೆ ಪತಿಯನ್ನು ಹುಲಿ ಎಳೆದುಕೊಂಡು ಹೋಗಿರಬಹುದು ಎಂದು ಅನುಮಾನ ಕೂಡ ವ್ಯಕ್ತಪಡಿಸಿದ್ದಳು
ಈ ಮಧ್ಯೆ ಕೆಲ ದಿನಗಳ ಹಿಂದೆ ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪತ್ನಿ ಸಲ್ಲಾಪುರಿ ಹುಲಿ ಕೊಂದಿದೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟಸ್ವಾಮಿಗೆ ಹುಡುಕಾಡಿದ್ದಾರೆ. ಪರಿಶೀಲನೆ ವೇಳೆ ಪ್ರಾಣಿ ಹೆಜ್ಜೆ ಗುರುತು ಪ್ತತೆಯಾಗಿತ್ತು. ಆದರೇ ಹುಲಿ ಎಲ್ಲೂ ಕಂಡಿರಲಿಲ್ಲ. ಮನೆ ಹಿಂದಿನ ತಿಪ್ಪೆಗುಂಡಿಯಲ್ಲೇ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ವಿಚಾರಿಸಿದಾಗ, ಪರಿಹಾರದ ಆಸೆಗೆ ಪತಿಯನ್ನು ಕೊಂದು, ಈ ನಾಟಕ ಆಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮುದ್ದೆಯಲ್ಲಿ ವಿಷ ಬೆರೆಸಿ ಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು