3:04 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ; ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದ ಸತಿ

14/09/2025, 17:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕ ಹೆಜ್ಜೂರು ಗ್ರಾಮದ ನಿವಾಸಿ ವೆಂಕಟಸ್ವಾಮಿ ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಪತ್ನಿ ಸಲ್ಲಾಪುರಿ ಎಂಬಾಕೆಯೇ ತನ್ನ ಗಂಡ ವೆಂಕಟಸ್ವಾಮಿಯನ್ನ ಹತ್ಯೆಗೈದು ನಂತರ ಹುಲಿ ಕೊಂದಿದೆ ಎಂದು ನಾಟಕವಾಗಿ ಇದೀಗ ಸಿಕ್ಕಿಬಿದ್ದಿದ್ದಾಳೆ. ಕಳೆದ ಕೆಲ ವರ್ಷಗಳಿಂದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಸಣ್ಣ ಮನೆಯೊಂದನ್ನು ಕಟ್ಟಿಕೊಂಡು ದಂಪತಿ ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ಪೊಲೀಸರಿಗೆ ದೂರು ನೀಡಿದ್ದಳು. ಅಷ್ಟೇ ಅಲ್ಲದೆ ಪತಿಯನ್ನು ಹುಲಿ ಎಳೆದುಕೊಂಡು ಹೋಗಿರಬಹುದು ಎಂದು ಅನುಮಾನ ಕೂಡ ವ್ಯಕ್ತಪಡಿಸಿದ್ದಳು.
ಈ ಮಧ್ಯೆ ಕೆಲ ದಿನಗಳ ಹಿಂದೆ ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪತ್ನಿ ಸಲ್ಲಾಪುರಿ ಹುಲಿ ಕೊಂದಿದೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟಸ್ವಾಮಿಗೆ ಹುಡುಕಾಡಿದ್ದಾರೆ. ಪರಿಶೀಲನೆ ವೇಳೆ ಪ್ರಾಣಿ ಹೆಜ್ಜೆ ಗುರುತು ಪ್ತತೆಯಾಗಿತ್ತು. ಆದರೇ ಹುಲಿ ಎಲ್ಲೂ ಕಂಡಿರಲಿಲ್ಲ. ಮನೆ ಹಿಂದಿನ ತಿಪ್ಪೆಗುಂಡಿಯಲ್ಲೇ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ವಿಚಾರಿಸಿದಾಗ, ಪರಿಹಾರದ ಆಸೆಗೆ ಪತಿಯನ್ನು ಕೊಂದು, ಈ ನಾಟಕ ಆಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮುದ್ದೆಯಲ್ಲಿ ವಿಷ ಬೆರೆಸಿ ಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು