11:27 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ ಕೆ ಶಿವಕುಮಾರ್ ಸಾಂತ್ವನ

06/06/2026, 10:32

*ಕಾಡಾನೆ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ* *ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿಎಂ.*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆ ಕೋಣನಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಸಂಧ್ಯಾ ಅಚ್ಚಯ್ಯ ಅವರ ಪತಿ ಹಾಗೂ ದೆಹಲಿಯಲ್ಲಿ ಡಿಜಿಪಿ ಆಗಿರುವ ಸುನಿಲ್ ಅಚ್ಚಯ್ಯ ಅವರಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿ, ಸಾಂತ್ವನ ಹೇಳಿದ್ದಾರೆ.
ಇದೊಂದು ಅಘಾತಕಾರಿ ಘಟನೆ. ವಿಷಯ ತಿಳಿದು ಬಹಳ ದುಃಖವಾಯಿತು. ನಿಮ್ಮ ನೋವಿನಲ್ಲಿ ನಾವೂ ಭಾಗಿ. ನಿಮಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿಎಂ ಅವರು ಸುನಿಲ್ ಅಚ್ಚಯ್ಯ ಅವರಿಗೆ ಹೇಳಿದರು.
ಕಾಡಾನೆ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿರುವುದಾಗಿಯೂ ಅವರು ತಿಳಿಸಿದರು.
ಸಂಧ್ಯಾ ಅಚ್ಚಯ್ಯ ಅವರು ತಿತಿಮತಿ ಸಮೀಪದ ಕಾಫಿ ತೋಟದಲ್ಲಿ ಕೆಲಸ ವೀಕ್ಷಣೆಗೆ ತೆರಳಿದ್ದಾಗ ಕಾಡಾನೆ ಹಠಾತ್ ದಾಳಿ ನಡೆಸಿ ಅವರನ್ನು ಸಾಯಿಸಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು