ಇತ್ತೀಚಿನ ಸುದ್ದಿ
ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ
23/09/2025, 20:45

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನು ಕಾರ್ಯಪ್ಪ ಎಂಬುವರು ತಮ್ಮ ಮನೆಯ ಸಮೀಪದಲ್ಲಿ ತನ್ನ ಪತ್ನಿ ಬಿ. ದೇಚಮ್ಮ ಎಂಬುವರಿಗೆ ಗುಂಡು ಹೊಡೆದ ಘಟನೆ ನಡೆದಿದೆ.
ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಇದೀಗ ಗೋಣಿಕೊಪ್ಪಲು ಸರಕಾರಿ ಆಸ್ಪತ್ರೆಯಲ್ಲಿ. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಿದ್ದಾರೆ.
ಸಂಬಂಧಿಕರು ಗೋಣಿಕೊಪ್ಪಲು ಪೊಲೀಸರಿಗೆ ಮಾಹಿತಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಗಾಯಾಳುವಿನ ಬಲಗಡೆ ಕೆನ್ನೆಗೆ ಗುಂಡೇಟು ತಗುಲಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.