ಇತ್ತೀಚಿನ ಸುದ್ದಿ
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ
18/08/2026, 17:57
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ ಬಳಿಯ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಗೋಪಾಲ್ (44) ಮೃತಪಟ್ಟವರು. ಮತ್ತೋರ್ವ ಕಾರ್ಮಿಕ ಜಾದವ್ (26) ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಅರಣ್ಯದ ಅಂಚಿನಿಂದ ಬಂದ ಕಾಡಾನೆ ದಾಳಿ ನಡೆಸಿದೆ. ಈ ಸಂದರ್ಭ ಇತರ ಕಾರ್ಮಿಕರು ಓಡಿ ಪಾರಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.












