ಇತ್ತೀಚಿನ ಸುದ್ದಿ
ಸಿದ್ದಾಪುರ ಸಮೀಪ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ; ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲು
18/07/2025, 11:57

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmal.com
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಶಿಲ್ಪಿ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕಾಡಾನೆ ದಾಳಿಗೆ ಕಾರ್ಮಿಕರಾದ ರಘು (42) ಮತ್ತು ಪ್ರವೀಣ್(30) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಕಾಡಂಚಿನ ಗ್ರಾಮಗಳಲ್ಲಿ ಆನೆಯ ಉಪಟಳ ಇತ್ತೀಚೆಗೆ ಜಾಸ್ತಿಯಾಗಿದ್ದು, ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ ಬಳಿ ಕಾಡಾನೆ ದಾಳಿಗೆ ಹಿರಿಯ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ.