3:34 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮಿಸ್ಸಿಂಗ್: ಕಾಡು ಸಲಗನ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನೊಳಗೆ ಪಲಾಯನ

20/02/2026, 22:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮದವೇರಿದ್ದ ಕಾಡಾನೆ ಕಂಡು ಹಿಂದಿರುಗುವಾಗ ದಾರಿ ತಪ್ಪಿ ಸಾಕಾನೆಯೇ ಮಿಸ್ ಆಗಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ಕಾಫಿ ತೋಟದಲ್ಲಿ ಕಾರ್ಮಿಕನನ್ನ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ರಾಜ್ಯದ ವಿವಿಧ ದುಬಾರೆಗಳಿಂದ 7 ಸಾಕಾನೆಗಳು ಬಂದಿದ್ದವು. ನಿನ್ನೆಯಿಂದ ಕಾರ್ಯಾಚರಣೆ ಕೂಡ ಆರಂಭಗೊಂಡಿತ್ತು. ಆದರೆ, ಇಂದು ಸಾಕಾನೆ ಜೂನಿಯರ್ ಅರ್ಜುನನ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಾಗಿ ಹುಡುಕಾಟ ನಡೆಸುತ್ತಿದ್ದಾಗ ಮದವೇರಿದ್ದ ಕಾಡಾನೆ ಏಕಾಏಕಿ ದಾಳಿಗೆ ಮುಂದಾಗಿದೆ. ಈ ಕಾದಾಟದ ಸಂದರ್ಭದಲ್ಲಿ ಜೂನಿಯರ್ ಅರ್ಜುನ ಕಾಡಿನೊಳಗೆ ಓಡಿಹೋಗಿ ಒಂದು ಗಂಟೆಗಳ ಕಾಲ ನಾಪತ್ತೆಯಾಗಿದ್ದ. ಅರಣ್ಯದಲ್ಲಿ ಸಾಕಾನೆಯೇ ಮಿಸ್ ಆಗಿದ್ದರಿಂದ ಅಧಿಕಾರಿಗಳು ಹಾಗೂ ಇ.ಟಿ.ಎಫ್ ಸಿಬ್ಬಂದಿಗಳು ಒಂದು ಗಂಟೆಗಳ ಕಾಲ ತೀವ್ರ ಹುಡುಕಾಟ ನಡೆಸಿ ಅರ್ಜುನನನ್ನ ಪತ್ತೆ ಹಚ್ಚಿದ್ದಾರೆ. ಒಂದೆಡೆ ಮದವೇರಿದ್ದ ಕಾಡಾನೆ ಭೀತಿ. ಮತ್ತೊಂದೆಡೆ ಕಾರ್ಯಾಚರಣೆಯ ಪ್ರಮುಖ ಆನೆಯೇ ನಾಪತ್ತೆಯಾದ ಕಾರಣ ಅರಣ್ಯಾಧಿಕಾರಿಗಳು ಮತ್ತು ಇಟಿಎಫ್ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು ಒಂದು ಗಂಟೆಗಳ ಕಾಲ ಅರಣ್ಯದಾದ್ಯಂತ ಹುಡುಕಾಡಿದ ಬಳಿಕ ಕೊನೆಗೂ ಜೂನಿಯರ್ ಅರ್ಜುನ ಪತ್ತೆಯಾಗಿದ್ದು ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಆನೆಯನ್ನು ಸುರಕ್ಷಿತವಾಗಿ ಕಟ್ಟಿ ಹಾಕಲಾಗಿದ್ದು ಮದವೇರಿದ ಕಾಡಾನೆಯ ಉಗ್ರ ರೂಪದಿಂದಾಗಿ ಸದ್ಯಕ್ಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಹಿಂದಿರುಗಿದ್ದಾರೆ. ಬಲಿಷ್ಠ ಗಂಡು ಕಾಡಾನೆಗೆ ಮದವೇರಿರುವುದರಿಂದ ಅರಣ್ಯಾಧಿಕಾರಿಗಳಿಗೆ ಕಾಡಾನೆ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ. ಸುತ್ತಮುತ್ತಲಿನ ಹಳ್ಳಿಗರು, ಕಾಫಿ ತೋಟದ ಕಾರ್ಮಿಕರು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು