11:33 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

25/05/2026, 22:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ತಂಡವೇ ಆನೆಗಳ ಆಕ್ರಮಣಕ್ಕೆ ಒಳಗಾಗಿ ಬೆಚ್ಚಿಬಿದ್ದ ಘಟನೆ ನಡೆದಿದೆ. ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಗುಂಪನ್ನು ಹಿಮ್ಮೆಟ್ಟಿಸಲು ನಡೆಸಿದ ಕಾರ್ಯಾಚರಣೆ ವೇಳೆ ಪರಿಸ್ಥಿತಿ ತೀವ್ರವಾಗಿ ನಿಯಂತ್ರಣ ತಪ್ಪಿದೆ. ಗುಹ್ಯ ಹಾಗೂ ನೆಲ್ಲಿ ಹುದಿಕೇರಿ ಗ್ರಾಮದ ಬೆಟ್ಟ ಪ್ರದೇಶ ಹಾಗೂ ಕಾಫಿ ತೋಟಗಳಲ್ಲಿ ದೀರ್ಘಕಾಲದಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರ ನಿರಂತರ ಮನವಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಆದರೆ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಗುಂಪಿನಲ್ಲಿದ್ದ ಆನೆಗಳು ಅಚಾನಕ್ ಕೋಪಗೊಂಡು ಸಿಬ್ಬಂದಿಯತ್ತ ದಾಳಿ ರೀತಿಯಲ್ಲಿ ಮುಂದಾಗಿವೆ.
ಪರಿಣಾಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆ ಸದಸ್ಯರು ಜೀವ ಉಳಿಸಿಕೊಳ್ಳಲು ಕಾಫಿ ತೋಟದ ಒಳಭಾಗದತ್ತ ಓಡಿಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕೆಲಕಾಲ ಕಾಫಿ ತೋಟದಾದ್ಯಂತ ಬೆನ್ನಟ್ಟಿದ ಕಾಡಾನೆಗಳು ನಂತರವೂ ಪ್ರದೇಶ ತೊರೆಯದೇ ಸ್ಥಳದಲ್ಲೇ ಗೂಡಾಗಿದ್ದು ಆತಂಕ ಹೆಚ್ಚಿಸಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಈ ಗುಂಪಿನಲ್ಲಿ 5 ಮರಿಯಾನೆಗಳು ಸೇರಿದಂತೆ 21ಕ್ಕೂ ಹೆಚ್ಚು ಕಾಡಾನೆಗಳಿವೆ ಎಂದು ಅಂದಾಜಿಸಲಾಗಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ ಹುದಿಕೇರಿ ಬೆಟ್ಟದ ಕಾಡು ಪ್ರದೇಶದಲ್ಲಿ ಈ ಆನೆಗಳು ಇನ್ನೂ ವಾಸ್ತವ್ಯ ಹೂಡಿದ್ದು, ಮುಂದಿನ ಹಂತದ ಕಾರ್ಯಾಚರಣೆಗೆ ಇಲಾಖೆ ಸಿದ್ಧತೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು