10:55 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

03/12/2025, 22:16

* ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪತ್ರ

* ಮತ್ತೊಂದು ದಿನ ಗೊತ್ತುಪಡಿಸಲು ಸಲಹೆ

* ಅದಕ್ಕೂ ಮುನ್ನ ಒಮ್ಮೆ ಸಮಾಲೋಚಿಸಲಿ ಸಿಎಂ

ನವದೆಹಲಿ(reporterkarnataka.com): ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಭೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಕಾರಣ ಸಮೇತ ಸ್ಪಷ್ಟಪಡಿಸಿರುವ ಸಚಿವರು, ತಾವು ಸಭೆ ನಿಗದಿಪಡಿಸುವ ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದಿದ್ದರೆ ಅನುಕೂಲವಾಗುತ್ತಿತ್ತು ಎಂದೂ ತಿಳಿಸಿದ್ದಾರೆ.

*ಸಂಸದರ ಜತೆ ಚರ್ಚಿಸದೆ ಸಭೆ ನಿಗದಿಪಡಿಸಿದ್ದ ಸಿಎಂ:* ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿ.8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದರೆ, ಈ ಬಗ್ಗೆ ಮೊದಲೇ ಸಂಸದರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿರುವುದಿಲ್ಲ ಎಂಬ ಅಂಶ ಇದೀಗ ಸಚಿವ ಪ್ರಲ್ಹಾದ ಜೋಶಿ ಅವರ ಪತ್ರದಿಂದ ಬಹಿರಂಗವಾಗಿದೆ.
ಸಚಿವ ಪ್ರಲ್ಹಾದ ಜೋಶಿ ಅವರು ಸಿಎಂಗೆ ಬರೆದ ಪತ್ರದ ಒಕ್ಕಣೆ ಇಂತಿದೆ. ʼಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಡಿ.8ಕ್ಕೆ ನವದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿರುವ ಬಗ್ಗೆ ಬರೆದ ಪತ್ರ ಡಿ.2ರಂದು ಸ್ವೀಕೃತವಾಗಿದೆ. ಆದರೆ, ತಮಗೇ ತಿಳಿದಿರುವಂತೆ ಕೇಂದ್ರದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನ ವೇಳೆ ಕಾರ್ಯ ಬಾಹುಳ್ಯ ಸಾಕಷ್ಟಿರುವುದು ತಮಗೆ ಗೊತ್ತಿರುವ ವಿಷಯವೇ. ಹಣಕಾಸು ಇಲಾಖೆ ಮಸೂದೆ ಮಂಡನೆಯಾಗುತ್ತಿವೆ. ಹಾಗಾಗಿ ಸಚಿವರಾದ ನಮಗೆಲ್ಲ ಸಂಸತ್ ಅಧಿವೇಶನ ಹಾಗೂ ಇಲಾಖೆಗಳ ಕಾರ್ಯದೊತ್ತಡವಿದೆ. ಅಲ್ಲದೇ, ಡಿ.8ರಂದೇ ಹೊಸ ಮತ್ತು ನವೀಕೃತ ಇಂಧನ ಇಲಾಖೆ ಸಂಬಂಧ ಪ್ರಧಾನಿ ವಿಶೇಷ ಸಭೆಯಿದೆ. ವಿತ್ತ ಮಂತ್ರಾಲಯದಿಂದ ಸಂಸತ್ತಿನಲ್ಲಿ ಬಿಲ್ ಮಂಡನೆಗೊಳಿಸುವುದು ಪೂರ್ವದಲ್ಲೇ ನಿಗದಿಗೊಂಡಿದೆ. ಅದೇ ದಿನ “ವಂದೇ ಮಾತರಂ” ಗೀತೆಯ 150ನೇ ವರ್ಷಾಚರಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಡಿ.8ರಂದು ನಿಗದಿಪಡಿಸಿದ ಸಭೆಯಲ್ಲಿ ನಾವುಗಳು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲʼ ಎಂದು ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೂ ಸಿಎಂಗೆ ಮರುಪತ್ರ ಬರೆದು ತಿಳಿಸಿದ್ದಾರೆ.

*ಮೊದಲೇ ಚರ್ಚಿಸಿ ಸಭೆ ನಿಗದಿಪಡಿಸಿದ್ದರೆ ಅನುಕೂಲವಿತ್ತು:* ʼಮುಖ್ಯಮಂತ್ರಿಗಳು ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದರೆ ಅನುಕೂಲವಾಗುತ್ತಿತ್ತು ಎಂದಿರುವ ಸಚಿವ ಪ್ರಲ್ಹಾದ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೂ ಸಭೆಗೆ ಪಾಲ್ಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ತಿಳಿಸಿಯಪಡಿಸಿದ್ದಾರೆʼ ಎಂದು ಸಿಎಂಗೆ ಪತ್ರ ಮುಖೇನವೇ ಪ್ರತ್ಯುತ್ತರ ನೀಡಿದ್ದಾರೆ.

*ಒಮ್ಮೆ ಚರ್ಚಿಸಿ ಮತ್ತೊಂದು ದಿನ ಗೊತ್ತುಪಡಿಸಿ:* ರಾಜ್ಯದ ಸಮಗ್ರ ಅಭಿವೃದ್ಧಿ ಜನಕಲ್ಯಾಣದ ವಿಷಯದಲ್ಲಿ ತಾವು ಬದ್ಧವಾಗಿದ್ದೇವೆ ಮತ್ತು ತಮ್ಮೊಂದಿಗೆ ಚರ್ಚಿಸಲು ಉತ್ಸುಕರಾಗಿದ್ದೇವೆ. ದಯಮಾಡಿ ಡಿ.8ರ ಬದಲಾಗಿ ಮತ್ತೊಂದು ದಿನವನ್ನು ಗೊತ್ತುಪಡಿಸಿ. ಆದರೆ, ಇದಕ್ಕೂ ಮುನ್ನ ಒಮ್ಮೆ ರಾಜ್ಯದ ಕೇಂದ್ರ ಸಚಿವರೊಂದಿಗೆ ಒಮ್ಮೆ ಸಮಾಲೋಚಿಸಿ ದಿನಾಂಕ ನಿಗದಿಪಡಿಸಿದಲ್ಲಿ ಅನುಕೂಲವಾಗುತ್ತದೆʼ ಎಂದು ಸಚಿವ ಪ್ರಲ್ಹಾದ ಜೋಶಿ ಸಿಎಂ ಗಮನ ಸೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು