9:54 AM Saturday11 - October 2025
ಬ್ರೇಕಿಂಗ್ ನ್ಯೂಸ್
ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ… ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು;…

ಇತ್ತೀಚಿನ ಸುದ್ದಿ

​ಯಾವ ಮುಖ ಇಟ್ಟುಕೊಂಡು ಸಮೀಕ್ಷೆ ವಿರೋಧಿಸ್ತಿದ್ದಾರೆ?: ಮಂಗಳೂರಿನಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶ್ನೆ

08/10/2025, 19:13

ಮಂಗಳೂರು(reporterkarnataka.com): ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.
ನಿನ್ನೆ (ಮಂಗಳವಾರ) ರಾತ್ರಿ 8.30ರ ವೇಳೆಗೆ ರಾಜ್ಯದಾದ್ಯಂತ ಸರಾಸರಿ 81% ಸಮೀಕ್ಷೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ 38%, ದಕ್ಷಿಣ ಕನ್ನಡದಲ್ಲಿ 68% ಹಾಗೂ ಉಡುಪಿಯಲ್ಲಿ 62% ಪ್ರಗತಿ ದಾಖಲಾಗಿದೆ. ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳ ಕಾರಣದಿಂದ ವಿಳಂಬವಾಗಿದೆ ಎಂದು ಅವರು ತಿಳಿಸಿದರು.
ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ರಜಾ ಸೌಲಭ್ಯವನ್ನು ಹೊಂದಾಣಿಕೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. “ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ 220 ಬೋಧನಾ ದಿನಗಳು ಅಗತ್ಯವಿದ್ದು, ಸದ್ಯಕ್ಕೆ 240 ದಿನಗಳು ಲಭ್ಯವಿವೆ. ರಜಾ ನೀಡಿದರೂ ಪಠ್ಯಕ್ರಮದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ,” ಎಂದರು.
ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಅಶ್ವತ್ಥ ನಾರಾಯಣ ಮತ್ತು ಆರ್. ಅಶೋಕ್ ಅವರ ಹೆಸರನ್ನು ಉಲ್ಲೇಖಿಸಿ ಸಚಿವರು ತೀವ್ರ ವಾಗ್ದಾಳಿ ನಡೆಸಿದರು. “ಸಂವಿಧಾನದ ಮೇಲೆ ಪ್ರಮಾಣ ಮಾಡಿ ಶಾಸಕರಾದ ನಾವು, ಸಂವಿಧಾನದಲ್ಲಿ ಅವಕಾಶವಿರುವ ಸಮೀಕ್ಷೆಯನ್ನು ಸರ್ಕಾರ ನಡೆಸಲು ಮುಂದಾದಾಗ, ಯಾವ ಮುಖ ಇಟ್ಟುಕೊಂಡು ವಿರೋಧ ಪಕ್ಷದವರು ಅದನ್ನು ತಡೆಹಿಡಿಯಲು ಪ್ರಯತ್ನಿಸುತ್ತಿದ್ದಾರೆ?” ಎಂದು ಪ್ರಶ್ನಿಸಿದರು.
ಇದೇ ವೇಳೆ ಅವರು, “ಯಡಿಯೂರಪ್ಪ ಮತ್ತು ದೇವೇಗೌಡರುಂತಹ ಪಕ್ವ ನಾಯಕರು ಸಮೀಕ್ಷೆ ವಿರೋಧಿಸಿ ಹೇಳಿಲ್ಲ. ಅವರಿಗೆ ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿದೆ ಎಂದು ನಂಬುತ್ತೇನೆ,” ಎಂದರು.
ಸಚಿವ ಮಧು ಬಂಗಾರಪ್ಪ ಅವರು, “ಈ ಸಮೀಕ್ಷೆಯು ಯಾವುದೇ ಜಾತಿ ಅಥವಾ ಧರ್ಮದ ವಿರುದ್ಧವಾದದ್ದಲ್ಲ. ಇದು ಮಾನವೀಯ ಮೌಲ್ಯಗಳ ಆಧಾರದಲ್ಲಿ ಸಮಾನತೆಯನ್ನು ಸಾಧಿಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಾತ್ಮಕ ದೃಷ್ಟಿಕೋನದಂತೆ ಕೈಗೊಳ್ಳಲಾದ ಪ್ರಯತ್ನವಾಗಿದೆ. ತುಳಿತಕ್ಕೊಳಗಾದ ವರ್ಗಗಳನ್ನು ಮೇಲಕ್ಕೆ ತರಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ,” ಎಂದು ಸಮರ್ಥಿಸಿಕೊಂಡರು.
ಸಚಿವರು ದಕ್ಷಿಣ ಕನ್ನಡ, ಉಡುಪಿ ಮತ್ತು ಬೆಂಗಳೂರಿನಲ್ಲಿ ಸುಮಾರು 15,000 ರಿಂದ 18,000 ಜನ ವಾಸ್ತವ್ಯದಲ್ಲಿ ಇಲ್ಲದಿರುವುದು (ವಿದೇಶದಲ್ಲಿ ಅಥವಾ ಬೇರೆಡೆಗೆ ತೆರಳಿರುವುದು) ತಾಂತ್ರಿಕ ಅಡಚಣೆ ಉಂಟುಮಾಡಿದೆ ಎಂದು ವಿವರಿಸಿದರು. ಸಮೀಕ್ಷೆಗೆ ಸಹಕರಿಸದವರ ಕುರಿತು, ಸರ್ಕಾರ ಇರುವ ನಿಯಮಾವಳಿಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಜಾಹೀರಾತು