ಇತ್ತೀಚಿನ ಸುದ್ದಿ
ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ದೈಹಿಕ ಸಂಬಂಧ: ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಕುಗ್ವೆ ಬಂಧನ
23/06/2024, 23:22
ಶಿವಮೊಗ್ಗ(reporterkarnataka.com): ಮಹಿಳೆಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಠಾಣೆ ಪೊಲೀಸರು
ಕುಗ್ವೆ ಅವರನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಸಾಗರದ ನಿವಾಸದಲ್ಲಿ ದಸ್ತಗಿರಿ ಮಾಡಲಾಗಿದೆ.
ಮದುವೆಯಾಗುತ್ತೇನೆ ಎಂದು ಹೇಳುತ್ತಾ ದೈಹಿಕ ಸಂಬಂಧ ಬೆಳೆಸಿದ್ದಾನೆ. ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.