2:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಹಿಳಾ ದಿನಾಚರಣೆ ದಿನವೇ ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಉಡುಗೊರೆ: ಕೇಂದ್ರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

08/03/2026, 20:18

ಬೆಂಗಳೂರು(reporterkarnataka.com): ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ “ಉಡುಗೊರೆ” ನೀಡಿದೆ ಎಂದು ಕಿಡಿ ಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ ಎಂದಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,
ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ 60 ರೂ ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹115 ಏರಿಕೆ ಮಾಡಲಾಗಿದೆ. ಕಳೆದ 11 ತಿಂಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ ಒಟ್ಟು ₹110 ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಹೊರೆ ಹಾಕಿದಂತಾಗಿದೆ ಎಂದು ತಿಳಿಸಿದ್ದಾರೆ.
ಅಡುಗೆ ಅನಿಲವು ಪ್ರತಿಯೊಂದು ಮನೆಯ ಅಗತ್ಯ ವಸ್ತುವಾಗಿದೆ. ಮನೆಗಳನ್ನು ನಡೆಸುವ ಮಹಿಳೆಯರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಈ ಅಗತ್ಯ ವಸ್ತುವಿನ ಬೆಲೆ ಹೆಚ್ಚಿಸುವುದು ಮಹಿಳೆಯರ ಮೇಲೆ ಮತ್ತಷ್ಟು ಆರ್ಥಿಕ ಒತ್ತಡ ತರುವ ಕ್ರಮವಾಗಿದೆ. ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುವ ಕೇಂದ್ರ ಸರ್ಕಾರ ಮಹಿಳೆಯರ ದಿನದಂದೇ ಇಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ವಿಷಾದಕರ ಎಂದು ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಸದಾ ಆರೋಪ ಮತ್ತು ಪ್ರತಿಭಟನೆ ಮಾಡುವ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ?
ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯನ್ನು ಅವರು ಸಮರ್ಥಿಸಿಕೊಳ್ಳುತ್ತಾರೆಯೇ? ಅಥವಾ ಬಡವರ ಮತ್ತು ಮಹಿಳೆಯರ ಪರವಾಗಿ ಧ್ವನಿ ಎತ್ತುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರವು ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಉಂಟಾಗಿರುವ ಆರ್ಥಿಕ ಭಾರವನ್ನು ಕಡಿಮೆ ಮಾಡಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು