6:35 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8 ಅಂತಾರಾಷ್ಟ್ರೀಯ ಮಹಿಳಾ ದಿನದಂದು ಚಾಲನೆ

06/03/2025, 17:20

ಬೆಂಗಳೂರು(reporterkarnataka.com):ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್‌ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸಚಿವರು ಹೇಳಿದ್ದಾರಲ್ಲದೆ, ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದ್ದಾರೆ.
ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ನಡೆಸುವ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಉಪ ಸಮಿತಿಗಳ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ, ಪ್ರತಿ ಗ್ರಾಮದ ಮಹಿಳೆಯರ ಅಂಕಿ-ಸಂಖ್ಯೆಯ ವಿವರಗಳನ್ನು ಸಂಗ್ರಹಿಸಿ ಮಹಿಳಾ ಗ್ರಾಮಸಭೆಯಲ್ಲಿ ಮಂಡಿಸಬೇಕು ಗ್ರಾಮಗಳಲ್ಲಿನ ಎಲ್ಲಾ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಎಲ್ಲಾ ಸದಸ್ಯರು ಮಹಿಳಾ ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಖಾತರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.
ಮಹಿಳಾಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ 16 ವಾರಗಳ ಅವಧಿಯಲ್ಲಿ ವಾರಕ್ಕೊಂದರಂತೆ ಸಾಂಸ್ಕೃತಿಕ, ಮನರಂಜನೆ, ಕ್ರೀಡೆ, ಆರೋಗ್ಯ, ಪೌಷ್ಟಿಕಾಂಶ, ನೈರ್ಮಲ್ಯ, ಮಹಿಳಾ ಕಾನೂನುಗಳು ಮುಂತಾದ ವಿಷಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸಲು ಸಚಿವರು ಸೂಚಿಸಿದ್ದಾರೆ. ಗ್ರಾಮಸಭೆ ನಡೆಸುವ ಸಮಯದಲ್ಲಿ ಆರೋಗ್ಯ ಶಿಬಿರ, ವಸ್ತು ಪ್ರದರ್ಶನ, ಸಸಿ ನೆಡುವ ಕಾರ್ಯಕ್ರಮ ಏರ್ಪಾಡು ಮಾಡಲು ಸಚಿವರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು