7:31 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ

16/11/2024, 11:15

ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.
ಡಜನಿಗೂ ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ11 ರ ವೇಳೆಗೆಅಪಘಾತಕ್ಕೀಡಾಗಿತ್ತು.
ಅಪಘಾತದಲ್ಲಿ ಸರಸ್ವತಿ, ಸರೋಜಾ,ಕಮಲಾ, ಜ್ಯೋತಿ, ಗೌರಮ್ಮ, ಶಾರದಾ ಸೇರಿದಂತೆ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಬಳಿಕ ಮೂರು ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರೆಲ್ಲ ಶಿಕಾರಿಪುರ ತಾಲೂಕಿನ ಬಿ ಅಣ್ಣಾಪುರ ಗ್ರಾಮದವರಾಗಿದ್ದಾರೆ.
ಕೊಲ್ಲೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಿಟಿ ವಾಹನ ರಸ್ತೆ‌ ಮೇಲೆ ಪಲ್ಟಿ ಹೊಡೆದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು