11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

15/03/2025, 18:09

ಮಂಗಳೂರು(reporterkarnataka.com): ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ‌ ನ್ಯಾಯವಾದಿ ಕೆ .ಪೃಥ್ವಿರಾಜ್ ರೈ ಹೇಳಿದರು.
ಪಿ.ಎ. ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಶನಿವಾರ ನಡೆದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಪೀಠಿಕೆಯ ಕುರಿತು ಮಂಗಳೂರು
ವಿಶ್ವವಿದ್ಯಾನಿಲಯ ಕಾಲೇಜಿನ ಒಡಂಬಡಿಕೆಯ ಸಂಚಾಲಕ
ಡಾ.ಅಬೂಬಕ್ಕರ್ ಸಿದ್ಧಿಕ್,ವಿವರಿಸಿಕೊಟ್ಟರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ. ಹಾಸಿಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ (ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು), ಶರಫುದ್ದೀನ್ ಪಿ.ಕೆ, (ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ), ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ವಾಣಿಶ್ರೀ ವೈ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು