9:55 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಪ್ರಕರಣ

18/09/2025, 20:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು ದಸರಾ ಉದ್ಘಾಟನೆಯ ವಿವಾದ ಕುರಿತು ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧಾರಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ-2025ರ ಉದ್ಘಾಟನೆಗೆ ಬೂಕರ್​ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್​ ಅವರನ್ನು ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ.
ಸೆಪ್ಟೆಂಬರ್ 22ರಂದು ಉತ್ಸವ ಪ್ರಾರಂಭವಾಗಲಿದ್ದು, ಈ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರಿದ್ದ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಒತ್ತಾಯಿಸಿದರು.
ಮೈಸೂರಿನಲ್ಲಿನ ಚಾಮುಂಡೇಶ್ವರಿಗೆ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಅವಕಾಶ ನೀಡಲಾಗಿದೆ. ಇದು ಅಲ್ಲಿನ ಸಂಪ್ರದಾಯಗಳಿಗೆ ವಿರುದ್ಧ. ಹೀಗಾಗಿ, ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ವಕೀಲರು ಹೇಳಿದಾಗ, ಸಿಜೆಐ ಗವಾಯಿ ಅವರು ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದರು.
ಬಾನು ಮುಷ್ತಾಕ್​ ಅವರನ್ನು ಮೈಸೂರು ದಸರಾ ಉದ್ಘಾಟಕರನ್ನಾಗಿ ಕರ್ನಾಟಕ ಸರ್ಕಾರ ಆಹ್ವಾನಿಸಿದೆ. ಇದು ಕನ್ನಡಪರ ಮತ್ತು ಹಿಂದು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ. ಮುಷ್ತಾಕ್ ಅವರು ಈ ಹಿಂದೆ ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ಬಳಿಕ ಈ ವಿವಾದ ಉದ್ಭವಿಸಿದ್ದು, ಕರ್ನಾಟಕ ಹೈಕೋರ್ಟ್​ನಲ್ಲಿ ಇದೇ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಪೀಠ, ಮೈಸೂರಿನ ಮಾಜಿ ಸಂಸದ ಪ್ರತಾಪ್​ ಸಿಂಹ ಅವರು ಸಲ್ಲಿಸಿದ ಅರ್ಜಿ ಸೇರಿದಂತೆ ಎಲ್ಲ ಮನವಿಗಳನ್ನು ವಜಾ ಮಾಡಿತ್ತು,ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಉಲ್ಲಂಘನೆಯಾಗಿದೆ ಎಂಬುದು ಕಂಡುಬಂದಿಲ್ಲ. ಅದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮವನ್ನು ಬೇರೆ ಧರ್ಮದ ವ್ಯಕ್ತಿಯೊಬ್ಬರು ಉದ್ಘಾಟಿಸುವುದರಿಂದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಯಾವುದೇ ಮೌಲ್ಯಗಳು ಉಲ್ಲಂಘನೆಯಾಗುತ್ತವೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿಗಳನ್ನು ವಜಾಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು