9:07 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ವಿಶ್ವ ಆರೋಗ್ಯ ದಿನಾಚರಣೆ: ಆತ್ಮಶಕ್ತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

07/04/2026, 21:06

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬೆಂದೂರ್‌ವೆಲ್ ಶಾಖೆಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪಿನಮೊಗರು ಕಸಿಹಿತ್ಲು ಕೆವಿಕೆ ಮೈದಾನದಲ್ಲಿ ಜರುಗಿತು.
ಕೆವಿಕೆ ಸೇವಾ ಸಮಿತಿ (ರಿ.) ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್ , ಮಂಗಳೂರು , ಪಂಪ್‌ವೆಲ್, ಕಲ್ಪವೃಕ್ಷ ಮತ್ತು ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರಿನ ಕದ್ರಿಯ ಮಂಗಳಾ ಕಾಲೇಜು ಮತ್ತು ಮಂಗಳಾ ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗ, ದೇರಳಕಟ್ಟೆ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ಶಿಬಿರ ಜರುಗಿತು.
ಈ ಶಿಬಿರವನ್ನು ಅಸಂಘಟಿತ ಕಾರ್ಮಿಕ ಇಲಾಖೆಯ ಕಾರ್ಮಿಕಾಧಿಕಾರಿಯಾದ ಶ್ರೀಮತಿ ವಿಲ್ಮ ತಾವ್ರೊ ಅವರು ಉದ್ಘಾಟಿಸಿ ಮಾತನಾಡಿ, “ಜನಸಾಮಾನ್ಯರು ಕೇಂದ್ರ ಸರ್ಕಾರದ ಸವಲತ್ತುಗಳ ಹಾಗೂ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರ ಹಿತ ದೃಷ್ಟಿಯಿಂದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ನೇತೃತ್ವದಲ್ಲಿ ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುತ್ತಿರುವುದು ಶ್ಲಾಘನೀಯ. ಕಟ್ಟಡ ಕಾರ್ಮಿಕರಿಗೆ ಹಾಗೂ ಎಲ್ಲಾ ವಿಧದ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತು, ವಿಮೆಗಳ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಿ. ಎಸ್. ಸಿ. ಮಂಗಳೂರು ಇದರ ನೋಡೆಲ್ ಅಧಿಕಾರಿಯಾದ ಶ್ರೀ ಪ್ರಶಾಂತ್ ಅವರು ಮಾತನಾಡಿ, “ಜನಸಾಮಾನ್ಯರು ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರುವುದು ಅವರ ಜವಾಬ್ದಾರಿ ಆಗಿರುವುದರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸಿರುತ್ತಿರುವ ಇಂತಹ ಶಿಬಿರಗಳು ಸಹಕಾರಿಯಾಗಿದೆ. ಹಾಗಾಗಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಿರಿ. ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಾದ ಆಯುಷ್ಮಾನ್ ಕಾರ್ಡ್, ಇಶ್ರಾಮ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ , ರಾಷ್ಟ್ರೀಯ ಪಿಂಚಣಿ ಯೋಜನೆ , ಪಾನ್ ಕಾರ್ಡ್ , ಪಾಸ್‌ಪೋರ್ಟ್ ನೋಂದಾವಣೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಲಯನ್ಸ್ ಕ್ಲಬ್ ಮಂಗಳೂರು ಕಲ್ಪವೃಕ್ಷ ಇದರ ಅಧ್ಯಕ್ಷರಾದ ಲಯನ್ ಉಮೇಶ್ ಅಧಿಕಾರಿ ಯವರು ಮಾತನಾಡಿ, “ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯ , ಆರೋಗ್ಯದ ತಪಾಸಣೆ ನಿರಂತರ ಮಾಡುತ್ತ ಬಂದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸಿರುತ್ತಿರುವ ಆರೋಗ್ಯ ಶಿಬಿರದ ಪ್ರಯೋಜನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯಸ್ಥರಾದ ಡಾ. ರೇಖಾ ಪಿ. ಶೆಣೈ ಅವರು ಮಾತನಾಡಿ “ಆಧುನಿಕ ಯುಗದಲ್ಲಿ ದಂತ ಕಾಳಜಿಯು ಅಗತ್ಯವಾಗಿದೆ. ಇವತ್ತಿನ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚೀಕರಣ, ಹುಳುಕು ಹಲ್ಲುಗಳನ್ನು ಭರ್ತಿಗಳನ್ನು ಮಾಡುವುದು, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಳ್ಳುಗಳನ್ನು ಕೀಳಿಸುವುದು ಮುಂತಾದ ಸೇವೆಗಳು ಲಭ್ಯವಿದ್ದು, ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಮಂಗಳಾ ಆಸ್ಪತ್ರೆ ಮತ್ತು ಕಾಲೇಜು ಕದ್ರಿ ಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಕು. ಮಂಜುಳಾ ರವರು “ವೈದ್ಯಕೀಯ ಶಿಬಿರದ ಉಪಯೋಗ ಹಾಗೂ ಆರೋಗ್ಯದ ಸಮಸ್ಯೆ ಯಾವ ರೀತಿ ಬರುತ್ತದೆ. ಇದರ ಮುಂಜಾಗ್ರತೆಯನ್ನು ಯಾವ ರೀತಿ ಮಾಡಬಹುದು” ಎಂಬುದರ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಆತ್ಮಶಕ್ತಿ ಸಹಕಾರಿ ಸಂಘ ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೆ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಉದ್ದೇಶಕ್ಕಾಗಿ ಜನರ ಆರೋಗ್ಯದ ದೃಷ್ಟಿಯಲ್ಲಿ ಎಲ್ಲಾ ಕಡೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿದ್ದೇವೆ. ನಮ್ಮ ಆರೋಗ್ಯದ ಬಗ್ಗೆ ಮುಂಜಾಗೃತೆ ವಹಿಸಿದರೆ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಇವತ್ತಿನ ಶಿಬಿರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಎಲ್ಲರೂ ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘವು ಸಂಘದ ಸದಸ್ಯರಿಗೆ ಮನೆ ನಿರ್ಮಾಣ, ಬಸ್ಸು ತಂಗುದಾಣ ನಿರ್ಮಾಣ, ಬಡಕುಟುಂಬಗಳಿಗೆ ಆರ್ಥಿಕ ನೆರವು ಹಾಗೂ ಬಡ ವಿದಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇವತ್ತಿನ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ವೈದ್ಯರು, ಎಲ್ಲಾ ಸಂಘ ಸಂಸ್ಥೆಗಳಿಗೆ, ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ರಾಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಲಯನ್ಸ್ ಕ್ಲಬ್ ಮಂಗಳೂರು ಕಲ್ಪವೃಕ್ಷ ಇದರ ಸ್ಥಾಪಕಾಧ್ಯಕ್ಷರಾದ ಲಯನ್ ರಾಜೇಶ್, ಅಧ್ಯಕ್ಷರಾದ ಲಯನ್ ಉಮೇಶ್ ಅಧಿಕಾರಿ, ದಕ್ಷಿಣ ಮಂಡಲದ ಅಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀ ರಾಮ್ ಪ್ರಸಾದ್, ಮಂಗಳಾ ಆಸ್ಪತ್ರೆ ಮತ್ತು ಕಾಲೇಜು ಕದ್ರಿ ಮಂಗಳೂರು ಇದರ ಕಣ್ಣಿನ ತಜ್ಞರಾದ ಶ್ರೀಮತಿ ಸುಷ್ಮಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ವಿಜೇಶ್, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್, ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಉಚಿತ ಔಷಧಿ ಹಾಗೂ ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೆ.ವಿ.ಕೆ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯರಾದ ಶ್ರೀಮತಿ ವೀಣಾ ಮಂಗಳ ರವರು ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ವಂದಿಸಿದರು. ಕೆ.ವಿ.ಕೆ ಸೇವಾ ಸಮಿತಿಯ ಕೋಶಾಧಿಕಾರಿಯಾದ ಶ್ರೀ ಸೌರಭ್ ಅಂಚನ್ ರವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು