5:59 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಾಸನ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡಲು ಸಿಎಂಗೆ ಓಲೈಕೆ ರಾಜಕಾರಣ ಅಡ್ಡಿಯ ಚಿಂತೆ: ಬಸವರಾಜ ಬೊಮ್ಮಾಯಿ

15/09/2025, 19:22

ಬೆಂಗಳೂರು(reporterkarnataka.com): ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನವೀಯತೆ ಸತ್ತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಆಂಗ್ಲ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ದುರಂತದಲ್ಲಿ ಜನರು ತಮ್ಮ ಕುಟುಂಬದವರ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ದೊಡ್ಡ ಪ್ರಮಾಣದ ನಷ್ಟವುಂಟಾಗಿದೆ. ತಮ್ಮ ಕೂಟುಂಬದ ಆದಾಯ ತರುವ ವ್ಯಕ್ತಿಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅವರು ಭಿಕ್ಷೆ ಬೇಡುತ್ತಿಲ್ಲ. ಸರ್ಕಾರ ಮಾನವೀಯತೆಯ ಆಧಾರದಲ್ಲಿ ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೋಮು ಗಲಭೆಯಲ್ಲಿ ಮೃತರಾದವರಿಗೆ, ಪ್ರಚೋದನೆಯಲ್ಲಿ ಸಾವಿಗೀಡಾದವರಿಗೆ, ವೈನಾಡಿನ ದುರಂತಕ್ಕೆ ಈಗ ಹಿಮಾಚಲ ಪ್ರದೇಶಕ್ಕೆ ಹಣ ನೀಡಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣೆಗೆಯ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಈಗ ಹೆಚ್ಚಿನ ಪರಿಹಾರ ನೀಡಿದರೆ ತುಷ್ಡೀಕರಣದ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಮಾನವೀಯತೆ ಸತ್ತು ಹೋಗಿದೆ. ಅವರಲ್ಲಿ ನಿಜವಾಗಲೂ ಮಾನವೀಯತೆ‌ ಇದ್ದರೆ ಹೆಚ್ಚಿನ ಪರಿಹಾರ ನೀಡಿ ಎಲ್ಲ ಸಮುದಾಯದ ನಾಯಕನಾಗಲಿ ಎಂದು ಆಗ್ರಹಿಸಿದರು.

*ಜನರ ಭಾವನೆ ಗೌರವಿಸಬೇಕು:*
ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸಬೇಕಿತ್ತು. ಇದು ಜನರ ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯ. ಇದು ಕಾನೂನಿನ ವ್ಯಾಪ್ತಿಯಲ್ಲಿ ತೀರ್ಮಾನ ಮಾಡಲು ಆಗುವುದಿಲ್ಲ. ಇದು ರಾಜ್ಯ ಸರ್ಕಾರ ಮಾಡಬೇಕಿರುವ ತೀರ್ಮಾನ, ಬಾನು ಮುಷ್ತಾಕ ಅವರ ಆಯ್ಕೆ ಓಲೈಕೆ ರಾಜಕಾರಣದ ಒಂದು ಭಾಗ, ಬಾನು ಮುಷ್ತಾಕ ಅವರ ಬಗ್ಗೆ ನಮಗೆ ಗೌರವ ಇದೆ. ಆದರೆ, ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

*ಬಿಸಿಸಿಐ ಕ್ರಿಕೆಟ್ ಆಡಿಸಬಾರದಿತ್ತು:*
ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನ ತಂಡದ ಜೊತೆ ನಡೆದುಕೊಂಡ ರೀತಿಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೂರ್ಯಕುಮಾರ್ ಯಾದವ ನಾಯಕನಾಗಿ ಗ್ರೌಂಡ್ ಒಳಗೂ ಹಾಗೂ ಗ್ರೌಂಡ್ ಹೊರಗೂ ಉತ್ತಮವಾಗಿ ನಡೆದುಕೊಂಡಿದ್ದಾರೆ. ತಂಡದ ಗೆಲುವನ್ನು ಭಾರತೀಯ ಯೋಧರಿಗೆ ಅರ್ಪಿಸಿದ್ದಾರೆ. ಆದರೆ, ಪೆಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನ ಜೊತೆಗೆ ಕ್ರೀಡೆ ಸೇರಿದಂತೆ ಯಾವುದೇ ರೀತಿಯ ಸಂಬಂಧ ಇಟ್ಟುಕೊಳ್ಳಬಾರದಿತ್ತು. ಈ ನಿಟ್ಟಿನಲ್ಲಿ ಬಿಸಿಸಿಐ ಪಾಕಿಸ್ತಾನದ ಜೊತೆ ಆಡದಿರಲು ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಹೇಳಿದರು.

*ಪಾಟ್ ಹೋಲ್ ಡ್ರೈವ್:*
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ನಾಗರಿಕರು ಪಾಟ್ ಹೋಲ್ ಡ್ರೈವ್ ಅನುಭವ ಪಡೆಯುತ್ತಿದ್ದಾರೆ‌. ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಗೆ ಯಾವುದೇ ಹಣ ನೀಡುತ್ತಿಲ್ಲ. ಅತಿ ಹೆಚ್ಚು ತೆರಿಗೆ ನೀಡುತ್ತಿರುವುದು ಬೆಂಗಳೂರು. ಪ್ರತಿ ಮೂರು ತಿಂಗಳಿಗೆ ತೆರಿಗೆ ಹೆಚ್ಚಳ ಮಾಡುತ್ತಿದ್ದಾರೆ. ಜನರು ಗುಂಡಿಗಳ ಜೊತೆ ಬದುಕುವಂತಾಗಿದೆ. ಜನರು ಇದರ ವಿರುದ್ದ ದೊಡ್ಡ ಸಂಖ್ಯೆಯಲ್ಲಿ ಸರ್ಕಾರದ ವಿರುದ್ದ ಧ್ವನಿ ಎತ್ತಬೇಕು ಎಂದರು.
ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಗುಂಡಿಗಳಿವೆ. ರಾಜ್ಯ ಸರ್ಕಾರ ಬೆಂಗಳೂರಿಗೆ 1100 ಕೋಟಿ ರೂ. ನೀಡುವುದಾಗಿ ಹೇಳಿದೆ. ಅದು ಅತಿ ಸಣ್ಣ ಮೊತ್ತವಾಯಿತು. ನಾವು ಬೆಂಗಳೂರು ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ನೀಡಿದ್ದೇವು. ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿರುವ ಹಣ ಯಾವುದಕ್ಕೂ ಸಾಲುವುದಿಲ್ಲ. ಸಾಮಾಜಿಕ ಜಾಲ ತಾಣದಲ್ಲಿ ಜನರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೇವಲ ಬ್ರ್ಯಾಂಡ್ ಬೆಂಗಳೂರು ಎಂದು ದೊಡ್ಡದಾಗಿ ಹೇಳುತ್ತಿದ್ದಾರೆ. ಬೆಂಗಳೂರಿನ ಜನ ಪ್ರತಿ ದಿನ ಗುಂಡಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಈ ಸರ್ಕಾರ ಇರುವವರೆಗೂ ಜನರು ಗುಂಡಿಗಳ ಜೊತೆ ಇರುವ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು