7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ

20/12/2021, 21:52

ಉಡುಪಿ(reporterkarnataka.com): 

ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ.

ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಇದರ ತನಿಖೆ ಕೈಗೆತ್ತಿಕೊಂಡ ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರ ದ ನಯಿ ಜಿಂದಗಿ ಎಂಬಲ್ಲಿ ಕಳ್ಳರನ್ನು ಬಂಧಿಸಿದ್ದಾರೆ. ನಾಜಿಯಾ ಆಸೀಫ್  ಶೇಕ್ , ಆಸೀಫ್ ಅಸ್ಪಕ್ ಶೇಕ್ , ಸೌದಾಗರ್ ದಿಲೀಪ್ ಗೋಂದುಕರ್ ಬಂಧಿತ ಆರೋಪಿಗಳು.ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೃತ್ಯ ಕ್ಕೆ ಉಪಯೊಗಿಸಿದ ತವೆರಾ ವಾಹನ ಹಾಗೂ ಮೊಬೈಲ್, 2,99, 792 ಮೌಲ್ಯದ ನಾಲ್ಕು ಚಿನ್ನದ ಬಲೆಗಳನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಗಳನ್ನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಉಡುಪಿ ಜಿಲ್ಲಾ ಎಸ್.ಪಿ. ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ ಪಿ ಕುಮಾರ ಚಂದ್ರ, ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನದಲ್ಲಿ ನಗರ ಠಾಣೆ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್, ,ಉಪನಿರೀಕ್ಷಕ ವಾಸಪ್ಪ ನಾಯ್ಕ್ ,ಪ್ರೊಬೇಷನರಿ ಪಿ.ಎಸ್ .ಐ ಪ್ರಸಾದ್ , ಸಿಬ್ಬಂದಿಗಳಾದ ಸತೀಶ್ , ಸಂತೋಷ್ ರಾಥೋಡ್ , ಗಡ್ಡಯ್ಯ ಹಿರೇಮಠ, ಮಲ್ಲಯ್ಯ, ನಾಗರತ್ನ ಬಾಲಕೃಷ್ಣ, ಸುಷ್ಮ , ರಿಯಾಜ್ ಅಹ್ಮದ್ , ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್ , ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು