1:29 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು