4:04 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು