8:04 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಮಾಜಿ  ಸಚಿವ ಡಾ. ಕೆ.ಟಿ. ಜಲೀಲ್ 

01/06/2022, 12:40

ಮಂಗಳೂರು(reporterkarnataka.com): ನಮ್ಮ ದೇಶ ಜಾತ್ಯತೀತ ರಾಷ್ಟ್ರವಾಗಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು, ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ, ಶಾಸಕ ಡಾ. ಕೆ.ಟಿ. ಜಲೀಲ್ ಹೇಳಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಜಾತ್ಯತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ  ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜನೆ ಮಾಡಿದ ರಾಜ್ಯಮಟ್ಟದ ಮುಸ್ಲಿಂ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ನಮ್ಮ ದೇಶ ಜಾತ್ಯತೀತ ರಾಷ್ಟ್ರವಾಗಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು.  ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ. ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ದೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್ ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು ಎಂದು ವಿವರಿಸಿದರು. 

ಮೊಘಲರ ಆಡಳಿತ ಕೊನೆಗೊಂಡಿದ್ದು ಅವರ ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಮೊಘಲರ ಸಹಿಷ್ಣುತೆಯ ಕಾರಣದಿಂದಾಗಿ ಭಾರತದಲ್ಲಿ ಆಡಳಿತ ನಡೆಸಿದ್ದಾರೆ. ದೇಶವನ್ನು 16 ವರ್ಷ ಆಡಳಿತ ಮಾಡಿದ್ದು ಯಾವುದೇ ಧರ್ಮ ಆಚರಿಸದ ಜವಾಹರಲಾಲ್

 ನೆಹರೂ ಆಗಿದ್ದಾರೆ. ಯಾವುದೇ ಧರ್ಮ ಆಚರಿಸದ ನೆಹರೂ ಅವರನ್ನು ಯಾರೂ ಪ್ರಶ್ನಿಸಿಲ್ಲ. ಬಾಕ್ರಾ-ನಂಗಲ್ ಉದ್ಘಾಟನೆ ಮಾಡಿದ ನೆಹರೂ ಈ ಅಣೆಕಟ್ಟನ್ನು ತೋರಿಸಿ ಇದು ‘ಭಾರತದ ದೇವಾಲಯ’ ಎಂದು ಹೇಳಿದ್ದರು. ಆದರೆ ವರ್ತಮಾನ ಕಾಲದಲ್ಲಿ ಕಾಂಗ್ರೆಸ್‌ನ ಮೃದು ಹಿಂದುತ್ವ ಕಾಣುವಾಗ ಬೇಸರವಾಗುತ್ತದೆ. 

ವಿಶ್ವದಾದ್ಯಂತ ಭಾರತ ಗುರುತಿಸಿದ್ದು ಬಹುತ್ವದಿಂದಾಗಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಭಾರತವನ್ನು ಆಡಳಿತ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ನಡೆದಿದ್ದು ಇದುವೇ ಆಗಿದೆ. ಈ ದೇಶ ತೊರೆದು ಹೋದ ಜನರು ತಾವು ನೆಲೆ ನಿಂತ ದೇಶವನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತದಲ್ಲಿ ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ ಎಂದು ಹೇಳಿದರು. 


ನಾವು ದೇಶವನ್ನು ಪಾಕಿಸ್ತಾನವನ್ನಾಗಿ ಮಾಡಲು ಶ್ರಮಿಸಬಾರದು. ವಿಭಜನೆಯಾಗಿ ನಿರ್ಮಾಣವಾದ ಪಾಕಿಸ್ತಾನ ಎಂದಿಗೂ ಕೂಡಾ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯತೀತಯೇ ನಮ್ಮ ಜೀವವಾಯು. ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ ಎಂದರು.

ವೇದಿಕೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯಾಧ್ಯಕ್ಷರು, ಹಿರಿಯ ಸಾಹಿತಿ ಡಾ. ಕೆ. ಷರೀಫಾ, ಸಿಪಿಐಎಂ ಕರ್ನಾಟಕ ರಾಜ್ಯ ಕಾರ್ಯದರ್ಶಿ ಯು ಬಸವರಾಜು, ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ, ಸಾಹಿತಿ ಕೆ ನೀಲಾ, ರಾಜ್ಯ ಮುಖಂಡರು ಕೆ ಎಸ್ ವರಲಕ್ಷ್ಮೀ, ಅಕ್ರಂ ಪಾಶ ಬಾಗೇಪಳ್ಳಿ, ಶೇಖ್ ಷಾ ಖಾದ್ರಿ, ಖಾಸಿಂ ಸರ್ದಾರ್ ರಾಮದುರ್ಗ, ಖಾಸಿಂ ಕೊಪ್ಪಳ,  ಉಪಸ್ಥಿತರಿದ್ದರು. ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಸಯ್ಯದ್ ಮುಜೀಬ್ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು