ಇತ್ತೀಚಿನ ಸುದ್ದಿ
ಇಯರೆಂಡ್: ಮುಳ್ಳಯ್ಯನಗಿರಿಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ಜಾಮ್
31/12/2022, 16:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಿನ ಮುಳ್ಳಯ್ಯನಗಿರಿ ಬೆಟ್ಟ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.
ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಗಿರಿ ಪ್ರದೇಶಕ್ಕೆ ಲಗ್ಗೆ ಇಡುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ 1000ಕ್ಕೂ ಅಧಿಕ ವಾಹನಗಳು ಬೆಟ್ಟದತ್ತ ಧಾವಿಸಿವೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರದಲ್ಲಿ ಭಾರೀ ಪ್ರವಾಸಿಗರು ತುಂಬಿದ್ದಾರೆ.
ಕೊರೋನಾ 4ನೇ ಅಲೆ ಆತಂಕದ ನಡುವೆಯೂ ಪ್ರವಾಸಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ.
ರಾಜ್ಯದ ಅತಿ ಎತ್ತರದ ಪ್ರದೇಶದ ಮುಳ್ಳಯ್ಯನಗಿರಿಯಲ್ಲಿ ಜನಜಾತ್ರೆಯೇ ಸೇರಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪ್ರವಾಸಿಗರು ಹೈರಾಣು ಆಗಿದ್ದಾರೆ. ರಾಜ್ಯ-ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.