8:31 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಎಡಪದವು: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದ 6ನೇ `ಜನಸ್ಪಂದನಾ’; 4000 ಜನ ಭಾಗಿ; 3000 ಫಲಾನುಭವಿಗಳು

06/12/2022, 20:26

ಮಂಗಳೂರು(reporterkarnataka.com) ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಎಡಪದವು ಪಟ್ಟಾಭಿರಾಮ ಸಭಾಂಗಣದಲ್ಲಿ ಎಡಪದವು, ಬಡಗ ಎಡಪದವು, ಮುತ್ತೂರು, ಮುಚ್ಚೂರು, ಕುಪ್ಪೆಪದವು, ಪಡುಪೆರಾರ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗಾಗಿ `ಜನಸ್ಪಂದನಾ’ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಡಾ.‌ ಭರತ್ ಶೆಟ್ಟಿಯವರು, ಮಂಗಳೂರು ನಗರ ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ 6 ನೇ ಜನಸ್ಪಂದನಾ ಕಾರ್ಯಕ್ರಮ ಇದಾಗಿದ್ದು, ಎಲ್ಲ ಜನಸ್ಪಂದನಾ ಕಾರ್ಯಕ್ರಮಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ, ಸ್ಪಂದನೆ ದೊರೆತಿದೆ. ಜನ ಹೆಚ್ಚಿನ ರೀತಿಯಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊoಡಿದ್ದಾರೆ. ಸಾರ್ವಜನಿಕರಿಗಾಗಿ ಹೆಚ್ಚುವರಿ ಕಂಪ್ಯೂಟರ್, ಪ್ರಿಂಟರ್ ಸಹಿತ ಡಾಟಾ ಸಿಬ್ಬಂದಿಗಳನ್ನು ನೇಮಿಸುವ ಮೂಲಕ ಜನರ ಕೆಲಸಗಳು ಸುಸೂತ್ರವಾಗಿ‌ ನಡೆಸಲಾಗಿದೆ.

ಹೆಚ್ಚೆಚ್ಚು ಜನರು ಇದರ ಪ್ರಯೋಜನ ಪಡೆದಾಗ ಮಾತ್ರ ಇಂತಹ ಕಾರ್ಯಕ್ರಮದ ಉದ್ದೇಶ ಪೂರ್ಣಗೊಳ್ಳುವುದು. ಜನಸ್ಪಂದನಾ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಮನೆಮನೆಗಳಿಗೆ ತೆರಳಿ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಬೇಕಾದ ದಾಖಲೆಗಳನ್ನು ಜನಸ್ಪಂದನಾ ಶಿಬಿರಕ್ಕೆ ತರಲು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇಂದಿನ ಜನಸ್ಪಂದನಾ ಕಾರ್ಯಕ್ರಮದಲ್ಲಿ 40 ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದು, ಒಂದೇ ಸೂರಿನಡಿ ಗ್ರಾಮಸ್ಥರ ಬಹುತೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಕ್ಕಿದೆ ಎಂದರು.


ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ಕಾಮಗಾರಿ ಆದೇಶ ಪತ್ರ, ಶೇ. 25ರ ಯೋಜನೆಯಡಿ ವೈದ್ಯಕೀಯ ನೆರವಿನ ಚೆಕ್, ವಿಕಲಚೇತನರಿಗೆ ಕಾರ್ಡ್ ಮತ್ತು ಚೆಕ್, ಹಕ್ಕುಪತ್ರ, ವಿವಿಧ ಪಿಂಚಣಿ ಆದೇಶ ಪ್ರತಿ, ಸುಕನ್ಯಾ ಯೋಜನೆ, ಅಂಚೆ ಖಾತೆ ಪುಸ್ತಕ, ಲೀಡ್ ಬ್ಯಾಂಕ್ ಸಾಲ ಪತ್ರ, ಕಾರ್ಮಿಕ ಇಲಾಖೆಯ ಕಿಟ್, `ಬೆಳಕು’ ಯೋಜನೆಯಡಿ ವಿದ್ಯುತ್ ಸಂಪರ್ಕದ ಆದೇಶ ಪ್ರತಿ ವಿತರಿಸಲಾಯಿತು.
ಮೆಸ್ಕಾ, ಕೃಷಿ, ತೋಟಗಾರಿಕೆ, ಆರೋಗ್ಯ, ಕಂದಾಯ, ಕಾರ್ಮಿಕ, ಸಾರಿಗೆ-ಕೆಎಸ್ಸಾರ್ಟಿಸಿ, ಶಿಕ್ಷಣ, ಲೀಡ್ ಬ್ಯಾಂಕ್, ಅಂಚೆ, ಭೂಮಾಪನ(ಸರ್ವೇ), ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮೀನುಗಾರಿಕೆ, ಪೊಲೀಸ್, ಜಿಲ್ಲಾ ಕೈಗಾರಿಕಾ ಕೇಂದ್ರ, ಹೆದ್ದಾರಿ ಪ್ರಾಧಿಕಾರ, ಸಣ್ಣ ನೀರಾವರಿ, ಆಯುಷ್ಮಾನ್, ಆಹಾರ ಮತ್ತು ಪಡಿತರ ಮತ್ತಿತರ 40 ಇಲಾಖೆಗಳ ಸಿಬ್ಬಂದಿಯು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿದ್ದಾರೆ.
ಈ ಭಾಗದಲ್ಲಿ ಇದು ಎರಡನೇ ಜನಸ್ಪಂದನಾ ಕಾರ್ಯಕ್ರಮವಾಗಿದ್ದು, ಜನರ ಪ್ರತಿಕ್ರಿಯೆ ಆಧರಿಸಿ ಇನ್ನಷ್ಟು ಜನಸ್ಪಂದನಾ ಶಿಬಿರ ಆಯೋಜಿಸಲಾಗುವುದು ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ತಿಳಿಸಿದರು.

ಎಡಪದವು ಪಂಚಾಯತ್ ಅಧ್ಯಕ್ಷರಾದ ಸುಕುಮಾರ ದೇವಾಡಿಗ,ಬಡಗ ಎಡಪದವು ಪಂಚಾಯತ್ ಅಧ್ಯಕ್ಷರಾದ ಹರೀಶ್ , ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಸತೀಶ್ ಬಳ್ಳಾಜೆ,ಮುಚ್ಚೂರು ಪಂಚಾಯತ್ ಅಧ್ಯಕ್ಷರಾದ ಮೋಹಿನಿ,ಪೆರಾರ ಪಂಚಾಯತ್ ಅಧ್ಯಕ್ಷರಾದ ಅಮಿತಾ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಲೋಕೇಶ್,ರಾಮ ಮಂದಿರ ಅಧ್ಯಕ್ಷರಾದ ಗೋಪಾಲ ಗೌಡ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಜನಾರ್ಧನ ಗೌಡ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಗಣೇಶ ಪಾಕಾಜೆ,ಭೂ ನ್ಯಾಯ ಮಂಡಳಿ ಸದಸ್ಯರಾದ ಸಂದೀಪ್ ಪಚ್ಚನಾಡಿ ಹಾಗೂ ಸ್ಥಳೀಯ ಭಾಗದ ಪಕ್ಷದ ಪ್ರಮುರು, ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು