1:25 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!;  ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ

09/08/2022, 10:01

ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುವುದು.

ಅಮೃತಾ ಜೋಷಿ ಅವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ. 

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿ ಅವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಆಗಮಿಸಬೇಕಾಗಿ ಪ್ರೀತಿಪೂರ್ವಕ ಆಮಂತ್ರಣ.

ಇತ್ತೀಚಿನ ಸುದ್ದಿ

ಜಾಹೀರಾತು