5:49 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ

17/10/2023, 14:39

ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.


ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೃಹತ್ ಕಂಪನಿಗಳು ಬಂದರೆ ಸಹಜವಾಗಿ ಉದ್ಯೋಗ ಸಿಗುವ ಆಕಾಂಕ್ಷೆ ಸಹಜವಾಗಿ ಇರುತ್ತದೆ. ಆದರೆ ಸ್ಥಳೀಯರಿಗೆ ಉದ್ಯೋಗದಲ್ಲಾಗಲಿ, ವೇತನದಲ್ಲಾಗಲಿ ತಾರತಮ್ಯ ಮಾಡಬಾರದು. ಎಂಆರ್‍ಪಿಎಲ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲು ತಾನು ಶಾಸಕ ಉಮಾನಾಥ ಕೊಟ್ಯಾನ್ ಅವರೊಂದಿಗೆ ಜತೆಯಾಗಲಿದ್ದೇನೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈಶ್ವರ್ ಕಟೀಲ್, ಸ್ಥಳೀಯ ಮನಪಾ ಸದಸ್ಯೆ ಸರಿತಾ ಶಶಿಧರ್, ಜಯಂತ್ ತೋಕೂರು,ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು