12:41 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ?

17/06/2021, 13:20

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಎಲ್ಲರ ಖಾತೆಗಳಲ್ಲೂ ಮುಖ್ಯಮಂತ್ರಿ ಪುತ್ರ ಕೈಯಾಡಿಸುತ್ತಿದ್ದಾರೆ ಎಂಬ ಆರೋಪ ಹಲವು ಸಮಯದಿಂದ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು

ಗಂಭೀರವಾಗಿ ಪರಿಗಣಿಸುತ್ತಾರೆಯೇ ಎಂಬ ಪ್ರಶ್ನೆ ಭಿನ್ನಮತೀಯ ಶಾಸಕರಲ್ಲಿ ಕಾಡಲಾರಂಭಿಸಿದೆ.

ಇದರೊಂದಿಗೆ ಪಕ್ಷ ಮತ್ತು ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ ಎನ್ನಲಾಗಿದೆ. ಸಂಪುಟದಲ್ಲಿರುವ ಕೆಲವು ಹಳೆಯ ಮುಖಗಳಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸುವುದು ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇದರಲ್ಲಿ ಸೇರಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಂಜೆ ದಿಲ್ಲಿಗೆ ಹೋದ ಮೇಲೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ನಿಂದ ಸೂಚನೆಗಳು ರವಾನೆಯಾಗುವ ಸಾಧ್ಯತೆಗಳಿವೆ. ಅದರಲ್ಲಿ ಮುಖ್ಯಮಂತ್ರಿ ಪರ ಬಣ ಹಾಗೂ ವಿರೋಧಿ ಬಣಕ್ಕೂ ಬಿಸಿ ಮುಟ್ಟಿಸುವ ಅಂಶಗಳು ಮ ಇರುತ್ತವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು