9:07 PM Tuesday7 - January 2025
ಬ್ರೇಕಿಂಗ್ ನ್ಯೂಸ್
60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ

ಇತ್ತೀಚಿನ ಸುದ್ದಿ

ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

06/01/2025, 20:07

*ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ*
- *ಕೆಇಬಿ ಇಂಜಿನಿಯರ್ ಗಳ ಸಂಘದ ವಜ್ರಮಹೋತ್ಸವ ಉಪನ್ಯಾಸ, ತಾಂತ್ರಿಕ ದಿನಚರಿ ಬಿಡುಗಡೆ*


ಬೆಂಗಳೂರು(reporterkarnataka.com):
ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.
ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
*ಕುಸುಮ್ ಯೋಜನೆ ತ್ವರಿತಗೊಳಿಸಿ*:
“ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ. ಆದ್ದರಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಹೆಚ್ಚು ಆದ್ಯತೆ ನೀಡಬೇಕು”, ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಮನವಿ ಮಾಡಿದರು.
*ಇಂಧನ ಶೇಖರಣೆಗೆ ಆದ್ಯತೆ*:
“ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದ್ದು, ಇದಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ”, ಎಂದು ತಿಳಿಸಿದರು.
ಸೆಸ್ಕ್ ಅಧ್ಯಕ್ಷ ಎ.ರಮೇಶ್ ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಸzಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ., ಕೆಇಬಿ ಎಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು