5:19 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಎಲ್ಲ ರಂಗಗಳಲ್ಲಿ ವಿಫಲವಾದ ಕಾಂಗ್ರೆಸ್ ಸರಕಾರಕ್ಕೆ ಆಡಳಿತ ವಿರೋಧಿ ಅಲೆ: ಶಾಸಕ ಡಾ. ವೈ ಭರತ್ ಶೆಟ್ಟಿ

11/04/2024, 21:43

ಮಂಗಳೂರು(reporterkarnataka.com): ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ. ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಗೊಂದಲದ ಗೂಡಾಗಿದೆ. ಸರಿಯಾದ ನಾಯಕತ್ವ ಇಲ್ಲದೆ ಕಾಂಗ್ರೆಸ್ ಪಕ್ಷ ದಿಕ್ಕುದೆಸೆ ಇಲ್ಲದಂತಾಗಿದೆ.
ರಾಜ್ಯದ ಜನರಿಗೆ ಸುಳ್ಳುಗಳನ್ನು ಪದೇ ಪದೇ ಹೇಳುತ್ತ ಜನರನ್ನು ಜಾತಿ ಮತದ ಹೆಸರಿನಲ್ಲಿ ಒಡೆಯುವ ಕೆಲಸ ಮಾಡುತ್ತಿದೆ. ತಾನು ಮಾಡಿದ್ದೇನೆ ಎಂದು ಹೇಳಿಕೊಳ್ಳಲು ಕಾಂಗ್ರೆಸ್‌ ಸರಕಾರಕ್ಕೆ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಯಾವುದೇ ಶಾಸಕರ ಕ್ಷೇತ್ರದಲ್ಲೂ ಒಂದೇ ಒಂದು ಹೊಸ ಯೋಜನೆಗೆ ಗುದ್ದಲಿ ಪೂಜೆಯಾಗಲಿ ಶಿಲಾನ್ಯಾಸ ಆಗಲಿ ನಡೆದಿಲ್ಲ ಎಂದು ಶಾಸಕರು ಟೀಕಿಸಿದರು.
ಬಜೆಟ್‌ನಲ್ಲಿ ಅಷ್ಟಿಷ್ಟು ಹಣ ಮೀಸಲಿಟ್ಟಿದ್ದೇವೆ ಎಂದು ಹೇಳಿದರೂ ಅದು ಕಾರ್ಯರೂಪದಲ್ಲಿ ಕಾಣುತ್ತಿಲ್ಲ. ಬಜೆಟ್‌ನಲ್ಲಿ ಬಮಡವಾಳ ವೆಚ್ಚ ಕಾಣುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ ಅದನ್ನೂ ಸರಿಯಾಗಿ ಜಾರಿಗೊಳಿಸಿಲ್ಲ. ಗೊತ್ತು ಗುರಿ ಇಲ್ಲದಂತೆ ಸ್ಕೀಮ್‌ಗಳು ಜಾರಿ ಆಗುತ್ತಿವೆ. ಆದರೆ ಫಲನಾಉಭವಿಗಳ ಮಾಹಿತಿ ಮಾತ್ರ ಸರಕಾರಿ ಅಧಿಕಾರಿಗಳಲ್ಲೂ ಸಿಗುತ್ತಿಲ್ಲ..
ಬಿಜೆಪಿ ಸರಕಾರವಿದ್ದಾಗ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚುವರಿಯಾಗಿದ್ದು, ಅನ್ಯ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ರಾಜ್ಯದ ಅಗತ್ಯಕ್ಕೆ ಬೇಕಾದಷ್ಟೂ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ವಿದ್ಯುತ್ತಿನ ಕೊರತೆಯಿಂದ ಉತ್ಪಾದನಾ ರಂಗವೂ ಕಂಗೆಟ್ಟಿದೆ. ಇದು ಕಾಂಗ್ರೆಸ್ ಸರಕಾರದ ಸಾಧನೆ. ಅಭಿವೃದ್ಧಿಯ ದೃಷ್ಟಿಯಲ್ಲಿ ರಾಜ್ಯವು ಈಗ ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಡಾ ಭರತ್ ಶೆಟ್ಟಿ ಹೇಳಿದರು.
ಇನ್ನೊಂದೆಡೆ ರಾಜ್ಯ ಈಗ ಬರದ ಸಮಸ್ಯೆಗೆ ಸಿಲುಕಿದೆ. ಆದರೆ ಅದನ್ನು ಸಮರ್ಥವಾಗಿ ಎದುರಿಸುವ ಯಾವುದೇ ಯೋಜನೆಯಾಗಲಿ, ದೂರದೃಷ್ಟಿಯಾಗಲಿ ಕಾಂಗ್ರೆಸ್ ಸರಕಾರಕ್ಕಿಲ್ಲ. ಕೇಂದ್ರ ಸರಕಾರ ಹಣ ಕೊಡುತ್ತಿಲ್ಲ ಎಂದು ಸುಳ್ಳು ಹೇಳುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಹಿಂದಿನ ಯುಪಿಎ ಸರಕಾರವಿದ್ದಾಗ ತೆರಿಗೆ ಹಂಚಿಕೆ ಇದ್ದುದು ಕೇವಲ ಶೇ 30.4ರಷ್ಟಿತ್ತು. ಅದನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಶೇ. 40ಕ್ಕೆ ಅಂದರೆ ಸುಮಾರು ಶೇ 10ರಷ್ಟು ಏರಿಸಿದೆ. ಆ ಮೂಲಕ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೆ ಮಾಡುತ್ತಿದೆ ಎಂದು ಭರತ್ ಶೆಟ್ಟಿ ನುಡಿದರು.
ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ನಡೆಯನ್ನು ಗಮನಿಸಿದರೆ, ಚುನಾವಣೆ ಎದುರಿಸುವ ಶಕ್ತಿ ಇಲ್ಲದ ಇವರು ನಿಷೇಧಿತ ಪಿಎಫ್‌ಐನ ಅಂಗವಾದ ಎಸ್‌ಡಿಪಿಐ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವ, ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಎಸ್‌ಪಿಡಿಐಗೆ ಸೇರಿದವರು. ಅಂತಹ ಸಂಘಟನೆಯ ಜತೆಗೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಭರತ್ ಶೆಟ್ಟಿ ಆರೋಪಿಸಿದರು.
ಬಿಜೆಪಿಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿ ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ನಗರದ ಲೇಡಿಹಿಲ್‌ ವೃತ್ತದಿಂದ ನವಭಾರತ ವೃತ್ತದ ವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು
ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯ ನಾಯಕರಾದ ವಿಕಾಸ್ ಕುಮಾರ್ ಪುತ್ತೂರು, ಮಹಾನಗರಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ವರುಣ್ ಚೌಟ, ಲೋಹಿತ್ ಅಮೀನ್, ಬಂಟ್ವಾಳ ಚುನಾವಣಾ ಪ್ರಭಾರಿ ಜಗದೀಶ್ ಶೇಣವ, ಜಿಲ್ಲಾ ಮಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು