8:19 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಮೇ 13ರತ್ತ: ಎನ್ ಐಟಿಕೆ ಸ್ಟ್ರಾಂಗ್ ರೂಮ್ ಗೆ ಸಿಆರ್ ಪಿಎಫ್ ಜವಾನರ ಸರ್ಪಗಾವಲು

11/05/2023, 20:00

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯ ವಿಧಾನಸಭೆ ಚುನಾವಣೆ ಮುಗಿದಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 60 ಮಂದಿ ಅಭ್ಯರ್ಥಿ ಗಳ ಭವಿಷ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯ ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿದೆ. ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಅಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಅರಬ್ಬೀ ಸಮುದ್ರ ತೀರದ ಮಂಗಳೂರು(ಉಳ್ಳಾಲ) ಕ್ಷೇತ್ರದಿಂದ ಆರಂಭಗೊಂಡು ಘಟ್ಟ ತಪ್ಪಿಲಿನ ಸುಳ್ಯ ಕ್ಷೇತ್ರದವರೆಗಿನ ಎಲ್ಲ 8 ಕ್ಷೇತ್ರಗಳ ಇವಿಎಂಗಳನ್ನು ಎನ್ ಐಟಿಕೆಯ ಸ್ಟ್ರಾಂಗ್ ರೂಮಿನಲ್ಲಿ ಇರಿಸಲಾಗಿದೆ. ಸಿಸಿ ಕ್ಯಾಮೆರಾದ ಕಣ್ಗಾವಲಿನೊಂದಿಗೆ ಮೂರು ಪಾಳಿಯಲ್ಲಿ ಸಿಆರ್ ಪಿಎಫ್ ಜವಾನರನ್ನು ಕಾವಲು ಕಾಯಲು ನಿಯೋಜಿಸಲಾಗಿದೆ. ಜತೆಗೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ. ಹಾಗೆ ಎನ್ ಐಟಿಕೆ ಆವರಣ ಸುತ್ತ ಸಿಆರ್ ಪಿಎಫ್ ಜವಾನರು ಹಾಗೂ ಸುರತ್ಕಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಮುಗಿಯುವ ವರೆಗೆ ಇವರು ಸ್ಟ್ರಾಂಗ್ ರೂಮಿನ ಕಾವಲು ಕಾಯಲಿದ್ದಾರೆ.
ಪ್ರಸ್ತುತ 6 ಮಂದಿ ಹಾಲಿ ಶಾಸಕರು, ಓರ್ವ ಮಾಜಿ ಸಚಿವರು, ಓರ್ವ ಮಾಜಿ ಶಾಸಕರು ಸ್ಪರ್ಧಿಸುತ್ತಿದ್ದಾರೆ. 60ರಿಂದ 80ರ ದಶಕದವರೆಗೆ ಕದ್ರಿಯ ಕೆಪಿಟಿಯಲ್ಲಿ ಮತ ಎಣಿಕೆ ಮಾಡಲಾಗುತ್ತಿತ್ತು. ನಂತರ ಬೊಂದೆಲ್ ನ ಎಂಜಿಎಂ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಸ್ಥಳದ ಅಭಾವ ಮತ್ತು ನಗರದೊಳಗೆ ಟ್ರಾಫಿಕ್ ಜಾಮ್ ಉಂಟಾಗುವುದನ್ನು ತಡೆಯುವ ಉದ್ದೇಶದಿಂದ ಇದೀಗ ಮತ್ತೆ ಮತ ಎಣಿಕೆ ಕೇಂದ್ರವನ್ನು ನಗರದ ಹೊರವಲಯದ ಸುರತ್ಕಲ್ ಸಮೀಪದ ಎನ್ ಐಟಿಕೆಗೆ ಸ್ಥಳಾಂತರಿಸಲಾಗಿದೆ.

ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆದ ಚುನಾವಣೆಯಲ್ಲಿ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿಗಳು ಇದ್ದರು. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು(ಉಳ್ಳಾಲ) ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಜಿಲ್ಲೆಯಲ್ಲಿ ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸದೆ ಬಿಜೆಪಿ ವಿರುದ್ಧ ಹೋರಾಟಕ್ಕೆ ಇಳಿದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಸುಳ್ಯ ಕ್ಷೇತ್ರ ಹೊರತುಪಡಿಸಿದರೆ ಜಿಲ್ಲೆ ಯಲ್ಲಿ ಎಎಪಿ ಸ್ಪರ್ಧೆ ಹೆಸರಿಗಷ್ಟೇ ಸೀಮಿತವಾಗಿದೆ. ಸುಳ್ಯ ಎಎಪಿ ಅಭ್ಯರ್ಥಿ ಸುಮನಾ ಅವರು ಕ್ಷೇತ್ರದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದಾರೆ. ಇಲ್ಲಿ ಎಎಪಿಯಿಂದ ತಕ್ಕ ಮಟ್ಟಿನ ರೋಡ್ ಶೋ ಕೂಡ ನಡೆದಿದೆ. ಉಳಿದಂತೆ ಎಎಪಿ ಅಭ್ಯರ್ಥಿಗಳು ಬರೇ ಮಾರ್ಕೇಟ್ ಗಳಿಗೆ ಮತ್ತು ಕೆಲವು ಪ್ರದೇಶದ ಅಂಗಡಿಗಳಿಗೆ ಮಾತ್ರ ಭೇಟಿ ನೀಡಿ ಮತಬೇಟೆ ನಡೆಸಿದ್ದಾರೆ. ಇದು ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ಮಾತ್ರ ತಿರುಗಾಡಿದ್ದು. ಜನತಾ ದಳ ಕೂಡ ಹೆಸರಿಗಷ್ಟೇ ಸ್ಪರ್ಧೆ ನಡೆಸುತ್ತಿದೆ. ಅಭ್ಯರ್ಥಿಗಳು ಮತದಾರರನ್ನು ಭೇಟಿಯಾಗುವ ಪ್ರಯತ್ನ ಮಾಡಿಲ್ಲ. ಜಿಲ್ಲೆಯ ಎರಡು ಪ್ರಬಲ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್
ಅಭ್ಯರ್ಥಿಗಳು ಕೂಡ ಎಲ್ಲ ಮನೆಗಳಿಗೆ ಭೇಟಿ ನೀಡುವಲ್ಲಿ ವಿಫಲರಾಗಿದ್ದಾರೆ. ಆದರೆ ಪಕ್ಷದ ಕಾರ್ಯಕರ್ತರು ಪ್ರತಿ ಮನೆಗಳಿಗೆ ಎರಡೆರಡು ಬಾರಿ ಭೇಟಿ ನೀಡಿ ಮತದಾರರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳು ಕೂಡ ತಮ್ಮ ಕರಪತ್ರವನ್ನು ಹೌಸಿಂಗ್ ಕಾಲೋನಿಗಳಿಗೆ ಮುಟ್ಟಿ

ಸಿದ್ದಾರೆ.
ದ.ಕ. ಜಿಲ್ಲೆಯ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿಗಳಿದ್ದಾರೆ. ಇವರ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರು.

ಇತ್ತೀಚಿನ ಸುದ್ದಿ

ಜಾಹೀರಾತು