11:52 PM Saturday21 - December 2024
ಬ್ರೇಕಿಂಗ್ ನ್ಯೂಸ್
ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

21/12/2024, 22:53

ಬೆಂಗಳೂರು(reporterkarnataka.com): ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಮಿಲ್ಲರ್ಸ್ ರಸ್ತೆಯ ಆರ್ಚ್ ಬಿಷಪ್ಸ್ ಹೌಸ್ ನ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಗತ್ತಿನಲ್ಲಿ ಹಾಗೂ ನಮ್ಮ ದೇಶದಲ್ಲಿ ಅನೇಕ ಧರ್ಮಗಳಿವೆ. ಎಲ್ಲಾ ಧರ್ಮಗಳ ಸಾರ ಮನುಷ್ಯರು ಒಂದೇ ಎನ್ನುವುದು. ಅವರ ಮಧ್ಯೆ ಯಾವುದೇ ಬೇಧ ಭಾವ ಇರದೆ ಪರಸ್ಪರ ಪ್ರೀತಿಸಿ ಗೌರವಿಸಬೇಕು ಎಂದರು.


*ಎಲ್ಲರನ್ನೂ ಸಮಾನವಾಗಿ ಕಾಣಬೇಕಿದೆ:*
ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆ ನಮ್ಮ ಸಮಾಜದಲ್ಲಿ ನಿರ್ಮಾಣವಾಗಬೇಕು ಪ್ರತಿಯೊಬ್ಬ ಮಾನವನೂ ಕೂಡ ಇದನ್ನು ಅನುಸರಿಸಬೇಕು. ಹಿಂದೂ, ಕ್ರೈಸ್ತ, ಇಸ್ಲಾಂ, ಬೌದ್ಧ, ಜೈನ ಸೇರಿದಂತೆ ಎಲ್ಲಾ ಧರ್ಮಗಳೂ ಅದನ್ನೇ ಹೇಳುತ್ತವೆ. ಯಾವ ಧರ್ಮವೂ ಧ್ವೇಷವನ್ನು ಬೋಧಿಸುವುದಿಲ್ಲ ಎಂದು ಅವರು ನುಡಿದರು.
*ವೈವಿಧ್ಯತೆಯಲ್ಲಿ ಏಕತೆ ಕಾಣಬೇಕು:*
ಕ್ರೈಸ್ತ ಶಾಂತಿದೂತನಾಗಿ ಜನ್ಮತಾಳಿದನು. ಶಾಂತಿ ನೆಲಸಬೇಕಾದರೆ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಬೇಕು. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಹೇಳಿದ್ದರು. ಇನ್ನೊಬ್ಬರ ಬಗ್ಗೆ ನಮಗೆ ದಯೆಯಿರಬೇಕು. ಅದನ್ನೇ ಕ್ರೈಸ್ತ ಧರ್ಮದವರು ಹೇಳುತ್ತಾರೆ. ಎಲ್ಲಾ ಧರ್ಮದವರನ್ನು ಗೌರವದಿಂದ ಕಾಣುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಲು ಸಾಧ್ಯ. ಭಾರತ ಬಹುತ್ವದ ದೇಶ. ಏಕ ಧರ್ಮ ಏಕ ದೇವರು, ಏಕ ಜಾತಿ ಇರಲು ಸಾಧ್ಯವಿಲ್ಲ ಅನೇಕ ಧರ್ಮ, ಭಾಷೆ , ಜಾತಿಗಳಿದ್ದು, ಇದರಲ್ಲಿಯೇ ಏಕತೆಯನ್ನು ಕಾಣಬೇಕಿದೆ. ಮನುಷ್ಯತ್ವ ಬಹಳ ಅವಶ್ಯಕ. ಕ್ರೈಸ್ತ ಧರ್ಮದವರು ಅದನ್ನೇ ಪ್ರತಿಪಾದಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಚ್ ಬಿಷಪ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು