4:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಏರುತ್ತಿರುವ ತಾಪಮಾನ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು; ಊರು ತುಂಬಾ ಮೆರವಣಿಗೆ

01/05/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆಯಿಲ್ಲದೆ ಬಿರು ಬಿಸಿಲ ಬೇಗೆಗೆ ತತ್ತರಿಸಿದ ಜನರು ಕಪ್ಪೆಗೆ ಮದುವೆ ಮಾಡಿಸಿದ ಪ್ರಸಂಗ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು,ನಂತರ ಕಪ್ಪೆಗಳ ಮೆರವಣಿಗೆ ನಡೆಸಲಾಯಿತು.
ಬತ್ತಿಹೋದ ಕೆರೆಕಟ್ಟೆಗಳು ಅಂತರ್ಜಲವಿಲ್ಲದೆ ಖಾಲಿ, ಖಾಲಿ ನಿಂತಿರುವ ಬೋರ್ ವೆಲ್ ಗಳಿಂದ ಅಯೋಮಯವಾದ ರೈತರ ಬೆಳೆಗಳು ಮತ್ತು ಜೀವನಕ್ಕೆ ಸಂಕಷ್ಟ ಎದುರಾಗಿದೆ.
ಅತೀವ ಉಷ್ಣಾಂಶ ದಿಂದ ಕೂಡಿದ ಬಿಸಿಲ ಬೇಗೆ ತಾಳಲಾರದ ವಯೋವೃದ್ಧರು, ಮಕ್ಕಳು ಮತ್ತು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.



ಇಂತಹ ಸಂಕಷ್ಟ ದಲ್ಲಿ ಕಪ್ಪೆಗಳ ಮದುವೆ ಮಾಡಿಸಿದರೆ ಮಳೆಯಾಗುತ್ತದೆ ಎಂಬುದು ತಲೆತಲಾಂತರದಿಂದ ನಡೆದುಕೊಂಡು ಬಂದ ಹಿರಿಯರ ವಾಡಿಕೆ ಮತ್ತು ನಂಬಿಕೆಯಾಗಿದೆ. ಅದರಂತೆ
ಕಪ್ಪೆಗಳಿಗೆ ಮದುವೆ ಮಾಡಿಸಲಾಯಿತು. ಬಳಿಕ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ನಡೆದ ಕಪ್ಪೆಗಳ ಮದುವೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ವಾದ್ಯಗಳೊಂದಿಗೆ ಕಪ್ಪೆಗಳ ಮೆರವಣಿಗೆ ಮಾಡಿ ಮಳೆಗಾಗಿ ಮಹಾದೇವನ ಪ್ರಾರ್ಥನೆ ಮಾಡಲಾಯಿತು.
ಮೆರವಣಿಗೆಯಲ್ಲಿ ಉಯ್ಯೊ ಉಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು