11:09 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಯೋಗ ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

21/06/2026, 16:01

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(repprterkarnataka.com): 2014ರಲ್ಲಿ ಪ್ರಾರಂಭಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ ಜಾಗತಿಕ ಮಟ್ಟದಲ್ಲಿ ಸಿಕ್ಕ ಗೌರವವಾಗಿದೆ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.


ಆರೋಗ್ಯಯುತ ಜೀವನವನ್ನು ಹೇಗೆ ಪಡೆಯಬೇಕು ಎಂಬುದನ್ನು ಭಾರತವು ಜಗತ್ತಿಗೆ ಕಲಿಸಿದೆ. ಇಂದಿನ ಜಾಗತಿಕ ಪರಿಸ್ಥಿತಿಯನ್ನು ಅವಲೋಕಿಸಿದಾಗ ಯೋಗದ ಮಹತ್ವವು ಎಷ್ಟು ಅಗತ್ಯವಾಗಿದೆ ಎಂದು ತಿಳಿದು ಬರುತ್ತದೆ ಎಂದು ಅವರು ತಿಳಿಸಿದರು.

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ , ಜಿಲ್ಲಾ ಸರ್ಜನ್ ಡಾ ಶಿವಪ್ರಕಾಶ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಡಿಸಿಪಿ ರವಿಶಂಕರ್, ಎ ಎಸ್ ಪಿ ಅನಿಲ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ ಉಪಸ್ಥಿತರಿದ್ದರು.


ಯೋಗದಲ್ಲಿ ವಿಶ್ವ ದಾಖಲೆ ಮಾಡಿದ ಕಡಬ ತಾಲೂಕಿನ ಏನಕಲ್ಲು ನಿವಾಸಿ, 6ನೇ ತರಗತಿ ವಿದ್ಯಾರ್ಥಿ ಅಕ್ಷಯ ಬಿ ಎಂ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.



ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಣಿಕರ್ಣಿಕಾ ಸ್ವಾಗತಿಸಿದರು.
ನಂತರ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು