2:37 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಒತ್ತಾಯ

21/02/2026, 19:16

ಬೆಂಗಳೂರು(reporterkarnataka.com): ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವಿರುದ್ದ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು.


ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್ಸಿನವರು ತಮ್ಮ ಕೆಟ್ಟ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ. ವಿದೇಶಿ ಅತಿಥಿಗಳ ಸಮ್ಮುಖದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಅವಮಾನ ಮಾಡುವಂತೆ ನಡೆದುಕೊಂಡಿದ್ದು ಖಂಡನೀಯ ಎಂದರು. ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ 30- 35 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದು, ಭಾರತಕ್ಕೆ ಅವಮಾನವಾಗುವ ರೀತಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.
ಭಾರತದಲ್ಲಿ ಉತ್ತಮ ಆವಿಷ್ಕಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರಿಗೂ ಧಿಕ್ಕಾರ ಕೂಗಿದ ಯುವ ಕಾಂಗ್ರೆಸ್ಸಿಗರ ವರ್ತನೆ ಅನಪೇಕ್ಷಣೀಯ ಎಂದು ಹೇಳಿದರು. ಇವರ ವರ್ತನೆಯನ್ನು ಖಂಡಿಸಿ ಸಾರ್ವಜನಿಕರೂ ಒದೆ- ಗೂಸಾ ಕೊಟ್ಟಿದ್ದಾರೆ ಎಂದು ಗಮನ ಸೆಳೆದರು. ಇದನ್ನು ಖಂಡಿಸಿ ಕೆಪಿಸಿಸಿ ಕಚೇರಿಗೂ ಮುತ್ತಿಗೆ ಹಾಕುವುದಾಗಿ ಹೇಳಿದರು.
ಯುವ ಕಾಂಗ್ರೆಸ್ಸಿನವರು ಮಾನ ಮರ್ಯಾದೆ ಇಲ್ಲದವರಂತೆ ನಡೆದುಕೊಂಡಿದ್ದಾರೆ ಎಂದು ದೂರಿದರು. ಅವರನ್ನು ಸಮರ್ಥಿಸುವ ನಾಯಕರ ಕ್ರಮವೂ ಖಂಡನೀಯ ಎಂದು ನುಡಿದರು.
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾತನಾಡಿ, ಕಾಂಗ್ರೆಸ್ಸಿನವರು ಎಲ್ಲ ಕಾರ್ಯಕ್ರಮ, ಯೋಜನೆಗಳಿಗೆ ತಮ್ಮ ನಾಯಕರಾದ ನೆಹರೂ, ಇಂದಿರಾ, ರಾಜೀವ್ ಗಾಂಧಿಯವರ ಹೆಸರು ಇಟ್ಟುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು.
ನಮ್ಮ ಪ್ರಧಾನಿ ಮೋದಿ ಅವರು ಯಾವುದೇ ಒಂದು ಯೋಜನೆಗೂ ತಮ್ಮ ಹೆಸರನ್ನು ಇಟ್ಟುಕೊಂಡಿಲ್ಲ ಎಂದು ಗಮನ ಸೆಳೆದರು. ದೇಶದ ಮಾನ ಕಳೆಯುವಂತೆ ನಿನ್ನೆ ನಡೆದ ಘಟನೆ ಅತ್ಯಂತ ಖಂಡನೀಯ ಎಂದು ಟೀಕಿಸಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ಸಿಗರಿಗೆ ಧಿಕ್ಕಾರ ಕೂಗಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡ ಉಮೇಶ್ ಶೆಟ್ಟಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು