5:05 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಬಿಜೆಪಿ ಉಚ್ಚಾಟಿತ ಮುಖಂಡನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಹೈಕೋರ್ಟ್

22/04/2026, 22:19

ಬೆಂಗಳೂರು(reporterkarnataka.com): ಪುತ್ತೂರು ಬಿಜೆಪಿಯ ಉಚ್ಚಾಟಿತ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ.
ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ. ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸಿ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.

*ಆರೋಪಿ ಪರ ವಕೀಲರ ವಾದವೇನು?:*
ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ಪಿ.ಪಿ.ಹೆಗ್ಡೆ ವಾದ ಮಂಡಿಸಿದ್ದು, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್ ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲೂ ಆರೋಪಿಗಳನ್ನಾಗಿಸಿದ್ದಾರೆಂದು ಎಂದಿದ್ದಾರೆ.

*ಕೋರ್ಟ್ ಹೇಳಿದ್ದೇನು?:*
ಆರೋಪಿ ಕೃಷ್ಣ ಜೆ.ರಾವ್ ಪರ ಪಿ.ಪಿ.ಹೆಗ್ಡೆ ವಾದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಯುವತಿ, ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಆರೋಪಿ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.

*ಪ್ರಕರಣದ ಹಿನ್ನೆಲೆ:*
ಪುತ್ತೂರಿನ ಬಿಜೆಪಿಯ ಉಚ್ಚಾಟಿತ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್, ಶಾಲಾ ದಿನಗಳಿಂದ ಪರಿಚಿತವಾಗಿದ್ದ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಗರ್ಭವತಿಯಾಗಿದ್ದ ಯುವತಿಯನ್ನು ಮದುವೆಯಾಗುವಂತೆ ಸಂಧಾನ ಮಾಡಿಸಲಾಗಿತ್ತು. ಆರಂಭದಲ್ಲಿ ಮದುವೆಯಾಗಲು ನಿರಾಕರಿಸಿದ್ದ ಆತ ಕೊನೆಗೆ ಒತ್ತಾಯದ ಮೇರೆಗೆ ಒಪ್ಪಿದ್ದ. ಆದರೆ, ಆತನಿಗೆ 21 ವರ್ಷ ವಯಸ್ಸು ಪೂರ್ಣವಾಗದ ಕಾರಣ, ನಂತರ ಮದುವೆ ಮಾಡುವುದಾಗಿ ಆತನ ತಂದೆ ಜಗನ್ನಿವಾಸ ರಾವ್ ಭರವಸೆ ನೀಡಿದ್ದರು. ಆದರೆ, ಮಗು ಜನಿಸುತ್ತಿದ್ದಂತೆಯೇ ಕೃಷ್ಣ ರಾವ್ (ಆಗ ಆತನಿಗೆ 21 ವರ್ಷ ವಯಸ್ಸು ಪೂರ್ಣಗೊಂಡಿತ್ತು) ಮದುವೆಗೆ ನಿರಾಕರಿಸಿದ್ದ. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ಬಂಧನಕ್ಕೊಳಗಾಗಿದ್ದ ಕೃಷ್ಣ ರಾವ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಯುವತಿಗೆ ಹೆರಿಗೆಯಾದ ನಂತರ ‘ಮಗು ನನ್ನದಲ್ಲ’ ಎಂದು ಕೃಷ್ಣ ರಾವ್ ಹೇಳಿದ್ದರಿಂದ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಆರೋಪಿ, ಸಂತ್ರಸ್ತೆ ಹಾಗೂ ಮಗುವಿನ ರಕ್ತ ಮಾದರಿಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ದೃಢಪಟ್ಟಿತ್ತು. ಆದ್ರೆ, ಆರೋಪಿ ಮಾತ್ರ ಮದುವೆಯಾಗಲು ಒಪ್ಪುತ್ತಿಲ್ಲ. ಅಲ್ಲದೆ ಪ್ರಮುಖ ಬಿಜೆಪಿ ನಾಯಕರ ಸಂಧಾನ ವಿಫಲವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು