ಇತ್ತೀಚಿನ ಸುದ್ದಿ
ಸರಕಾರಿ ಬಸ್ಸಿನೊಳಗೆ ಯುವತಿಯ ಕೈಕಟ್ಟಿ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್
24/01/2026, 12:43
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಯೊಬ್ಬಳ ಕೈಕಟ್ಟಿ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ಚಿಕ್ಕಮಗಳೂರಿನಲ್ಲಿ ನಡೆದಿದೆ.



ಬಸ್ಸಿನೊಳಗೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಹಲ್ಲೆ ನಡೆಸಿದ ಯುವಕರು ಹಾಗೂ ಹಲ್ಲೆಗೆ ಒಳಗಾದ ಯುವತಿ ಯಾರೆಂಬುದು ಇದುವರೆಗೆ ಪತ್ತೆಯಾಗಿಲ್ಲ.
ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಡಿಯೋ ಆಧರಿಸಿ ಆರೋಪಿಗಳು ಮತ್ತು ಯುವತಿಯ ಗುರುತು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಅಮಾನುಷ ಕೃತ್ಯವು ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.












