5:00 PM Tuesday27 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ: ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

11/05/2026, 17:49

ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಯುವತಿಯೊಬ್ಬಳ ವಿಚಾರವಾಗಿ ಉಂಟಾದ ಮನಸ್ತಾಪ ಹಾಗೂ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಮಾದರಿಯ ಆಡಿಯೋ: ತಾನು ಸಾವನ್ನಪ್ಪುವ ಮೊದಲು ಅಭಿಷೇಕ್ ಆಡಿಯೋವೊಂದನ್ನು ರೆಕಾರ್ಡ್ ಮಾಡಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾನೆ. “ನನ್ನ ಸಾವಿಗೆ ಅದೇ ಗ್ರಾಮದ ಶಂಕರ, ದರ್ಶನ್, ಚೇತನ್ ಮತ್ತು ದಿನೇಶ್ ಎಂಬುವವರೇ ನೇರ ಕಾರಣ. ಇವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಈ ನಾಲ್ವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾನೆ.

*ರೈಲಿಗೆ ಸಿಲುಕಿ ದುರಂತ ಅಂತ್ಯ:* ಕಿರುಕುಳದಿಂದ ಮನನೊಂದಿದ್ದ ಅಭಿಷೇಕ್, ಭಾನುವಾರ ಸಂಜೆ ತಾಲೂಕಿನ ಕಡುವಿನಕೋಟೆ ಗ್ರಾಮದ ಸಮೀಪವಿರುವ ರೈಲ್ವೆ ಹಳಿಯ ಬಳಿ ತೆರಳಿದ್ದಾನೆ. ಅಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

*ಪೊಲೀಸ್ ತನಿಖೆ ಮತ್ತು ಪ್ರಕರಣ ದಾಖಲು:* ಮೃತ ಯುವಕ ರೆಕಾರ್ಡ್ ಮಾಡಿದ್ದ ಆಡಿಯೋ ಇದೀಗ ಪೊಲೀಸರ ಕೈಸೇರಿದ್ದು, ಅದನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲಾಗಿದೆ. ಆಡಿಯೋದಲ್ಲಿ ಹೆಸರಿಸಲಾದ ಶಂಕರ, ದರ್ಶನ್, ಚೇತನ್ ಹಾಗೂ ದಿನೇಶ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು