7:58 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ: ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ

26/06/2025, 20:48

ಮಂಗಳೂರು(reporterkarnataka.com): ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದೆ, ಅದನ್ನು ಸಾಕಾರಗೊಳಿಸಲಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ ಉದ್ಘಾಟಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಜಿಲ್ಲಾ ಉಸ್ತುವಾರಿಗಳಾದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಮಣಿಚೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಯಾಣ್ ತೇಜಸ್, ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಪದಾಧಿಕಾರಿಗಳಾದ ಸೋನಿಯ, ಸುರಯ್ಯ ಅಂಜುಮ್, ಅಭಿನಂದನ್ ಹರೀಶ್, ಶ್ರೀಪ್ರಸಾದ್, ಅಬ್ದುಲ್ ರವೂಫ್, ಪವನ್ ಸಾಲ್ಯಾನ್, ಕಾನೂನು ವಿಭಾಗ ಮುಖ್ಯಸ್ಥ ಶ್ರೀಧರ್, ಸಾಮಾಜಿಕ ಜಾಲತಾಣ ಸಂಚಾಲಕ ದೀಪಕ್ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಕಿರಣ್ ಬುಡ್ಲೆಗುತ್ತು, ಮುಖಂಡ ಸುಹೈಲ್ ಕಂದಕ್, ಜಿಲ್ಲಾ ಉಪಾಧ್ಯಕ್ಷರಾದ ಮೊಹಮ್ಮದ್ ಬಶೀರ್, ದೀಕ್ಷಿತ್ ಅತ್ತಾವರ, ಸುನಿತ್ ಡೇಸಾ, ವಿನೋಲ ಪಿಂಟೋ ಹಾಗೂ ಜಿಲ್ಲಾ ಪದಾಧಿಕಾರಿಗಳು, ವಿಧಾನಸಭಾ ಮತ್ತು ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು