ಇತ್ತೀಚಿನ ಸುದ್ದಿ
ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ ಬಂಧನ
17/08/2025, 22:54

ಬೆಂಗಳೂರು(reporterkarnataka.com): ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಬಂಧಿಸಲಾಗಿದೆ.
ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಚಿಕ್ಕಮಗಳೂರು ಎಸ್ ಪಿ ನೇಮಿಸಿದ್ದ ವಿಶೇಷ ತಂಡ ಗೋವಾದಲ್ಲಿ ಅರೆಸ್ಟ್ ಮಾಡಿದೆ ಎನ್ನಲಾಗಿದೆ.