8:10 AM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ನಾಳೆ ಮಂಗಳೂರಿಗೆ ಭೇಟಿ: ಯುವ ಜಾಗೃತಿ ಸಮಾವೇಶದಲ್ಲಿ ಭಾಗಿ

29/03/2022, 14:33

ಮಂಗಳೂರು(reporterkarnataka.com): ಯುವ ಕಾಂಗ್ರೆಸ್  ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್  ಅವರು ಮಾರ್ಚ್ 30ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ ಹೇಳಿದ್ದಾರೆ.

ನಗರದ ಪ್ರಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಲಪಾಡ್  ಅವರು 30ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಅವರು ಜಿಲ್ಲೆಯಲ್ಲಿ ನಡೆಯುವ ಯುವ ಕಾಂಗ್ರೆಸ್ ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದರು.

ಮೊಹಮ್ಮದ್ ಹಾರಿಸ್ ನಲಪಾಡ್ ರಾಜ್ಯಾಧ್ಯಕ್ಷರಾದ ಬಳಿಕ ಮೊದಲನೆ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರದ ಬೆಂದೂರಿನ

ಸೈಂಟ್ ಸೆಬಾಸ್ಟಿಯನ್ ಹಾಲ್ ನಲ್ಲಿ ನಡೆಯುವ ಯುವ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. 

ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ಪೂಜಾರಿ, ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಕೇಶ್ ದೇವಾಡಿಗ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಜೈಸನ್ ಸುರತ್ಕಲ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್ ರವರ ಪದಗ್ರಹಣ ಹಾಗೂ ಉಳಿದ ಎಲ್ಲಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಆದೇಶ ಪತ್ರ ನೀಡಲಾಗುವುದು. 

ಜಿಲ್ಲಾ ಯುವ ಕಾಂಗ್ರೆಸ್ ಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರುಗಳಿಗೆ ಆದೇಶ ಪತ್ರವನ್ನು ಈ ಸಂದರ್ಭದಲ್ಲಿ ನೀಡಲಾಗುವುದು. ಬಳಿಕ  ಮಧ್ಯಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವರು. ಅನಂತರ 2.30 ಕ್ಕೆ ಮಂಗಳೂರಿನಿಂದ ಪುತ್ತೂರಿಗೆ ಪ್ರಯಾಣಿಸಲಿದ್ದಾರೆ. 

ಸಂಜೆ 3.30 ಕ್ಕೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಾಣ ಗುರು ಸಭಾ ಭವನದಲ್ಲಿ ಆಯೋಜಿಸಿದ “ಯುವ ಧ್ವನಿ” ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಈ ಎಲ್ಲಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಎಲ್ಲಾ ನಾಯಕರುಗಳು,  ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ರಾಜ್ಯ ಯುವ ಕಾಂಗ್ರೆಸ್ ನಾಯಕರುಗಳು ಹಾಗೂ ಎಲ್ಲಾ ಬ್ಲಾಕ್ ನ ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಜೈಸನ್ ಸುರತ್ಕಲ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಮೊಹಮ್ಮದ್ ಮುಫೀದ್, ಶೇಖ್ ಕೈಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು