6:39 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ

08/12/2025, 23:42

- ಶಾಸಕ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಿಂದ ವಿಧಾನ ಪರಿಷತ್‌ನಲ್ಲಿ ಇಂದು ಉತ್ತರ

- 2.84 ಲಕ್ಷ ಯುವಕರು ನೊಂದಾಯಿತ ಫಲಾನುಭವಿಗಳು

- 17,715 ಫಲಾನುಭವಿಗಳಲ್ಲಿ 2327 ಮಂದಿ ಉದ್ಯೋಗ, ಕೆಲವರು ಸ್ವಉದ್ಯೋಗದಲ್ಲಿ ನಿರತ

- ಯೋಜನೆಯಡಿ ಫಲಾನುಭವಿಯಾಗಿದ್ದ ಬಳ್ಳಾರಿ ಜಿಲ್ಲೆಯ ಓರ್ವ ಸಾವು

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ.
ವಿಧಾನ ಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದ್ದು, ಯೋಜನೆಯ ಪ್ರಗತಿ ವಿವರಗಳನ್ನು ವಿವರಿಸಿದ್ದಾರೆ. ಒಟ್ಟು 2.84 ಲಕ್ಷ ನೋಂದಾಯಿತ ನಿರುದ್ಯೋಗಿ ಫಲಾನುಭವಿಗಳಲ್ಲಿ ಉದ್ಯೋಗ ಪಡೆದವರ ಸಂಖ್ಯೆ ಬಹಳ ಕಡಿಮೆ ಇರುವುದು ಸರ್ಕಾರದ ಉತ್ತರದ ಮೂಲಕ ದೃಢಪಟ್ಟಿದೆ.
ಸರ್ಕಾರದ ಮಾಹಿತಿಯ ಪ್ರಕಾರ, ಯುವನಿಧಿ ಯೋಜನೆ ಪ್ರಾರಂಭವಾದ ನಂತರ ಈವರೆಗೆ ಕೇವಲ 2,327 ಫಲಾನುಭವಿಗಳು ಉದ್ಯೋಗ ಅಥವಾ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ಅಂದರೆ, ಯುವನಿಧಿ ಯೋಜನೆಗೆ ನೋಂದಣಿ ಮಾಡಿದ ಫಲಾನುಭವಿಗಳನ್ನು ಆದ್ಯತೆ ಆಧಾರದ ಮೇಲೆ 17,715 ಫಲಾನುಭವಿಗಳನ್ನು ಸಂಪರ್ಕಿಸಲಾಗಿತ್ತು. ಅವರಲ್ಲಿ 2,327 ಫಲಾನುಭವಿಗಳಿಗೆ ಉದ್ಯೋಗ ಲಭಿಸಿರುವುದು ಖಾತ್ರಿಯಾಗಿದೆ. ಹೀಗಾಗಿ ಈ ಫಲಾನುಭವಿಗಳು ಉದ್ಯೋಗ ಕಂಡುಕೊಂಡ ಕಾರಣ ಇವರಿಗೆ ಮಾಸಿಕ ಭತ್ಯೆಯನ್ನು ನಿಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಯೋಜನೆಯ ಫಲಾನುಭವಿಗಳಲ್ಲಿ ಬಳ್ಳಾರಿ ಜಿಲ್ಲೆಯ ಒಬ್ಬರು ಮರಣ ಹೊಂದಿದ್ದಾರೆ ಎಂದು ಸಹ ಸಚಿವರು ಇದೇ ವೇಳೆ ದೃಢಪಡಿಸಿದ್ದಾರೆ.

*ಯುವ ಸಮೂಹಕ್ಕೆ ಬೆಳಕಾದ ಯುವನಿಧಿ: ದಿನೇಶ್‌ ಗೂಳಿಗೌಡ*
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ರಾಜ್ಯದ ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರಿಗೂ ಸಾಕಷ್ಟು ಅನುಕೂಲವಾಗಿದೆ. ಇದರಲ್ಲಿ ಭಾರತದ ಶಕ್ತಿಯಾಗಿರುವ ಯುವ ಸಮೂಹಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಮಹತ್ವ ಎಲ್ಲರಿಗೂ ಅರಿವಾಗುತ್ತಿದೆ. ಇಂದು ಲಕ್ಷಾಂತರ ಮಂದಿ ಪದವಿ ಪೂರೈಸಿ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೆಲವರಿಗೆ ಉದ್ಯೋಗ ಹುಡುಕಲು ಪಟ್ಟಣಗಳಿಗೆ ಬಂದು ನೆಲೆಗೊಳ್ಳಲೂ ಹಣಕಾಸಿನ ಸೌಲಭ್ಯ ಇರುವುದಿಲ್ಲ. ಅಲ್ಲದೆ, ಅವರ ಆರ್ಥಿಕ ಸ್ವಾವಲಂಬನೆಯೂ ಸಾಧ್ಯವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಯುವನಿಧಿ ಗ್ಯಾರಂಟಿ ಯೋಜನೆಯು ಲಕ್ಷಾಂತರ ಯುವಜನಕ್ಕೆ ಬೆಳಕಾಗಿದೆ ಎಂಬುದು ಈ ಅಂಕಿಅಂಶಗಳಿಂದ ದೃಢಪಟ್ಟಿದೆ. ನಮ್ಮ ಕಾಂಗ್ರೆಸ್‌ ಸರ್ಕಾರ ಸದಾ ಜನಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದ್ದಾರೆ.

*2024ರ ಜನವರಿಯಲ್ಲಿ ಆರಂಭವಾಗಿದ್ದ ಯುವನಿಧಿ ಯೋಜನೆ:*
ಯುವನಿಧಿ ಯೋಜನೆ ಕರ್ನಾಟಕದ ನಿರುದ್ಯೋಗಿ ಪದವೀಧರರು (₹3,000/ತಿಂಗಳು) ಮತ್ತು ಡಿಪ್ಲೊಮಾ ಹೊಂದಿದವರಿಗೆ (₹1,500/ತಿಂಗಳು) ಎರಡು ವರ್ಷಗಳವರೆಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯು 2022-23ನೇ ಸಾಲಿನಲ್ಲಿ ಹಾಗೂ ಬಳಿಕ ಉತ್ತೀರ್ಣರಾದ ಹಾಗೂ ಬಳಿಕ 6 ತಿಂಗಳಿಂದ ಉದ್ಯೋಗವಿಲ್ಲದ ಯುವಕರಿಗೆ ಅನ್ವಯವಾಗುತ್ತದೆ. 2023ರ ಡಿಸೆಂಬರ್ 26ರಂದು ಅರ್ಜಿ ಸಲ್ಲಿಕೆ ಆರಂಭವಾಗಿ, ವಿವೇಕಾನಂದ ಜಯಂತಿ ದಿನವಾದ 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಚಾಲನೆಗೊಂಡಿತು. ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಾವತಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು