4:25 PM Saturday6 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು