ಇತ್ತೀಚಿನ ಸುದ್ದಿ
ಯುವತಿ ಮೇಲೆ ಅತ್ಯಾಚಾರ ಪೂರ್ವನಿಯೋಜಿತ ಕೃತ್ಯ: ಮಾಜಿ ಸಚಿವ ಸುನಿಲ್ ಕುಮಾರ್
24/08/2024, 23:48
ಕಾರ್ಕಳ(reporterkarnataka.com): ಕಾರ್ಕಳದ ಬಡ ಕುಟುಂಬದ ಯುವತಿಯೊಬ್ಬಳನ್ನು ಅಪಹರಿಸಿ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಯುವತಿಯನ್ನು ಪುಸಲಾಯಿಸಿ ಕಾರಿನಲ್ಲಿ ಪಳ್ಳಿ ಎಂಬಲ್ಲಿವರೆಗೆ ಅಪಹರಿಸಿ ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು ಊಹಿಸಲು ಅಸಾದ್ಯ. ಪ್ರಕರಣ ಸಂಬಂಧ ಪೊಲೀಸರು ಸಮಗ್ರ ತನಿಖೆ ನಡೆಸಿ, ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು. ಸಂತ್ರಸ್ತ ಯುವತಿಯ ಆರೋಗ್ಯ ವೆಚ್ಚವನ್ನು ಸರಕಾರ ಭರಿಸಬೇಕು. ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ, ಆಕೆ ಮತ್ತು ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.