10:24 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Ullala | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಸಹಿತ 3 ಮಂದಿ ಬಂಧನ

18/04/2025, 00:53

ಮಂಗಳೂರು(reporterkarnataka.com):
ನಗರದ ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಬಂಗ್ಲೆ ಕೊಟ್ಟಾರಿಮೂಲೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಆಟೋ ಚಾಲಕ ಪ್ರಭುರಾಜ್ (38), ಕುಂಪಲ ನಿವಾಸಿ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮಣಿ ಎಂದು ಗುರುತಿಸಲಾಗಿದೆ.
ಉತ್ತರ ಭಾರತ ಮೂಲದ ಯುವತಿಯನ್ನು ಕೊಟ್ಟಾರಿಮೂಲೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಂಧಿತ ಆರೋಪಿಗಳಲ್ಲಿ
ಪ್ರಭುರಾಜ್ ಎಂಬಾತ ಮುಲ್ಕಿ ನಿವಾಸಿಯಾಗಿದ್ದು, 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದಾನೆ. ಮಿಥುನ್ಎಂಬಾತ ಕುಂಪಲ ನಿವಾಸಿಯಾಗಿದ್ದು ಇಲೆಕ್ಟಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಮಣಿ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ.
ಗೆಳೆಯನ ಜೊತೆಗೆ ಮುನಿಸಿಕೊಂಡು ಬಂದ ಉತ್ತರ ಪ್ರದೇಶ ಮೂಲದ ಈ ಯುವತಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮುನ್ನೂರು ಗ್ರಾಮದ ರಾಜೇಶ್ ಎಂಬವರ ಮನೆಯ ಬಾಗಿಲು ಬಡಿದ ಸದ್ದು ಕೇಳಿಸಿ ಮನೆಯವರು ಹೊರಗೆ ಬಂದು ನೋಡಿದಾಗ ಯುವತಿಯೊಬ್ಬಳು ನಶೆಯಲ್ಲಿದ್ದು, ಕಣ್ಣೀರು ಹಾಕುತ್ತಲೇ ಮನೆಯವರ ಬಳಿ ನೀರು ಕೇಳಿದ್ದಾಳೆ. ನೀರು ಕೇಳಿದ ತಕ್ಷಣ ಆಕೆ ಪ್ರಜ್ಞೆ ತಪ್ಪಿದ್ದು, ಸೇರಿದ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು