1:14 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ

02/12/2024, 20:20

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
*ಪ್ರೆಸ್ ಕ್ಲಬ್ ಗೌರವ:*
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿ ಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ., ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
*ಕನ್ನಡ ರಾಜ್ಯೋತ್ಸವ ಪ್ರಶಸ್ತಿ:* ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು