8:31 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಕ್ಷೇತ್ರದ ಪಾಲನಾ ಪರಿಷತ್ ನೂತನ ಕಾರ್ಯದರ್ಶಿಯಾಗಿ ಝೀಟಾ ಉಷಾ ಫೆರ್ನಾಂಡಿಸ್ ಆಯ್ಕೆ

31/07/2026, 20:16

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ 2026-28ನೇ ಸಾಲಿನ ಪಾಲನಾ ಪರಿಷತ್ ನ ಕಾರ್ಯದರ್ಶಿಯಾಗಿ ಸಿಟಿ ವಲಯದ ನೀರುಮಾರ್ಗ ಚರ್ಚ್ ನ ಝೀಟಾ ಉಷಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.
ಧರ್ಮಕ್ಷೇತ್ರದ ಪಾಲನಾ ಪರಿಷತ್ ನ ನೂತನ ಸಮಿತಿಯ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜುಲೈ 30ರಂದು ಗುರುವಾರ ಕೊಡಿಯಾಲ್ ಬೈಲಿನ ಬಿಷಪ್ಸ್ ಹೌಸ್ ಸಭಾಂಗಣದಲ್ಲಿ ನಡೆಯಿತು.
ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಹೊಸ ತ್ರೈವಾರ್ಷಿಕ ಅವಧಿಯ ಧ್ಯೇಯ- ದೃಷ್ಟಿಕೋನವನ್ನು ಮಂಡಿಸಿದರು ಹಾಗೂ ನೂತನ ಪರಿಷತ್ ಸದಸ್ಯರನ್ನು ಪರಿಚಯಿಸಿದರು.
ಧರ್ಮಕ್ಷೇತ್ರದ ಶ್ರೇಷ್ಠ ಗುರು ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಕಳೆದ ಅವಧಿಯ ಕಾರ್ಯಚಟುವಟಿಕೆಗಳ ವರದಿ ಹಾಗೂ ಮುಂದಿನ ಪಾಸ್ಟೋರಲ್ ಯೋಜನೆಗಳನ್ನು ಮಂಡಿಸಿದರು.
ಬಳಿಕ 2026-28ನೇ ಅವಧಿಯ ವಿವಿಧ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ನಡೆಸಲಾಯಿತು.
ಚುನಾವಣೆಯಲ್ಲಿ ಸಿಟಿ ವಲಯದ ನೀರು
ರ್ಮಾರ್ಗ ಚರ್ಚ್ ನ ಝೀಟಾ ಉಷಾ ಫೆರ್ನಾಂಡಿಸ್ ಅವರು ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದರು.
ಪುರುಷ ಪ್ರತಿನಿಧಿಯಾಗಿ ಸಿಟಿ ವಲಯದ ಕೆಲರಾಯ್
ಚರ್ಚ್ ನ ಸಂತೋಷ್ ಡಿ ಕೋಸ್ತಾ , ಮಹಿಳಾ ಪ್ರತಿನಿಧಿಯಾಗಿ ಕಿರೆಂ ವಲಯದ ಬಳಕುಂಜೆ ಚರ್ಚ್ ನ ಡಾ.ಫ್ರೀಡಾ ಫ್ಲಾವಿಯಾ ಡಿ ಸೋಜ,ಕ್ಯಾಥೊಲಿಕ್ ಕೌನ್ಸಿಲ್ ಆಫ್ ಇಂಡಿಯಾ ಪ್ರತಿನಿಧಿಗಳಾಗಿ
ಸಂತೋಷ್ ಡಿ ಸೋಜ ಮತ್ತು ಲಿನೆಟ್ ಫೆರ್ನಾಂಡಿಸ್,
ಕ್ಯಾಥೊಲಿಕ್ ಕೌನ್ಸಿಲ್ ಆಫ್ ಕರ್ನಾಟಕ ಪ್ರತಿನಿಧಿಗಳಾಗಿ ಆಲ್ವಿನ್ ಜೆರೊಮ್ ಡಿ ಸೋಜಾ ಪಾನೀರ್ ಮತ್ತು
ಡೆನಿಸ್ ಡಿಸಿಲ್ವಾ ಕುಲಶೇಖರ ಅವರು ಆಯ್ಕೆಗೊಂಡರು.
ಚುನಾವಣಾ ಪ್ರಕ್ರಿಯೆಯ ಬಳಿಕ ಸಿಬಿಸಿಐ ಲಿತರ್ಜಿ
ಆಯೋಗದ ಪ್ರತಿನಿಧಿ ವಂದನೀಯ ಡಾ. ರುಡಾಲ್ಫ್ ರಾಜ್ ಪಿಂಟೊ ಅವರು “2026-2028ರ ಸಿನೋದ್ ಅನುಷ್ಠಾನದ ಮಾರ್ಗಸೂಚಿಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನೂತನ ಕಾರ್ಯದರ್ಶಿ ಹಾಗೂ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು