ಇತ್ತೀಚಿನ ಸುದ್ದಿ
ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ
09/03/2026, 18:46
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆ ಸೆರೆ ಕಾರ್ಯಾಚರಣೆಗೆ ಬಳಸುತ್ತಿದ್ದ ಝೂ ಅಭಿ(21) ನಿಧನವಾಗಿದೆ.
ಭಾನುವಾರ ಸಂಜೆ ಝೂ ಅಭಿ ಕೊನೆಯುಸಿರೆಳೆದಿದೆ. ಅಭಿ ಕಳೆದ 6 ತಿಂಗಳಿಂದ ಕಾಲು ನೋವಿನಿಂದ ಬಳಲುತ್ತಿತ್ತು.
ಡಾ.ರಮೇಶ್ ಅವರು ಅಭಿಯ ಮರಣೋತ್ತರ ಪರೀಕ್ಷೆ ನಡೆಸಿ,
ಇಂದು ಅಂತ್ಯಕ್ರಿಯೆ ನಡೆಸಲಾಯಿತು. ಡಿಎಫ್ ಓ ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.













