12:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ: ಕಾರ್ಮಿಕ ಇಲಾಖೆಯಿಂದ ಜಾಗೃತಿ

16/08/2024, 19:00

ಶಿವು ರಾಠೋಡ್ ನಾರಾಯಣಾಪುರ ಯಾದಗಿರಿ

info.reporterkarnataka@gmail.com

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ PAN-INDIA Rescue and Rehabilitation Campaing ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಯಿತು.
ಕೊಡೇಕಲ್ ಉಪ ತಹಸೀಲ್ದಾರ್ ಕಲ್ಲಪ್ಪ ಅವರು ಮಾತನಾಡಿ, ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಬೆಂಗಳೂರಿನ‌ ರಾಜ್ಯ ಕಾನೂನು ಪ್ರಾಧಿಕಾರ ಕಾರ್ಮಿಕ ಆಯುಕ್ತ ಸೂಚನೆಯಂತೆ, ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆ.1ರಿಂದ 31ರ ವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.


ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕರಾದ ಶಿವರಾಜ್ ಜಮಾದಾರ್ ಅವರು, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು, ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ, ಒಬ್ಬ ಮಗುವನ್ನು ರಕ್ಷಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ಹಠಾತ್ ದಾಳಿ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ,
ಮಾರ್ಗದರ್ಶಿ ಸಂಸ್ಥೆಯವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ, ಕಾರ್ಮಿಕ ಇಲಾಖೆಯ ಬಾಲುನಾಯಕ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು