7:19 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ನವೆಂಬರ್ 9ರಂದು ಗುರುವಂದನಾ,ವಿದ್ಯಾರ್ಥಿ ವೇತನ ವಿತರಣೆ

07/11/2025, 10:57

ಬಂಟ್ವಾಳ( reporterkarnataka.com): ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನವೆಂಬರ್ 9ರಂದು ಬೆಳಗ್ಗೆ ಗಂಟೆ 9ರಿಂದ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ “ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ
ಬಂಟ್ವಾಳ ತಾಲೂಕಿನ ಬಿಲ್ಲವ ಸಮುದಾಯದ ಸರಕಾರಿ ಹಾಗೂ ಸರಕಾರೇತರ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ ವಿಭಾಗದ ಒಟ್ಟು 225
ಬೋಧಕ-ಬೋಧಕಿಯರಿಗೆ “ಬಿಲ್ಲವ ಗುರುವಂದನಾ ಗೌರವಾಭಿನಂದನೆ” ಹಾಗೂ ಜಿಲ್ಲಾ, ರಾಜ್ಯ ರಾಷ್ಟ್ರ ಮಟ್ಟದ ಸಾಧಕ ಗುರುಗಳಿಗೆ ” ಬಿಲ್ಲವ ಗುರುವಂದನಾ ಪುರಸ್ಕಾರ ” ಪ್ರದಾನ ಮಾಡಲಾಗುವುದು.
*ವಿದ್ಯಾರ್ಥಿ ವೇತನ ವಿತರಣೆ:* ಬಂಟ್ವಾಳ ತಾಲೂಕಿನ ಸ್ಥಾತಕೋತ್ತರ, ತಾಂತ್ರಿಕ, ವೈದ್ಯಕೀಯದ ಅರ್ಹ 100
ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸುಮಾರು‌ ₹5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ
*ಉದ್ಘಾಟನಾ ಸಮಾರಂಭ:* ಮಂಗಳೂರಿನ ಡಯಟ್ ಸೆಂಟರ್‌ನ ಹಿರಿಯ ಉಪನ್ಯಾಸಕರಾದ
ಡಾ. ತ್ರಿವೇಣಿ ಸಮಾರಂಭ ಉದ್ಘಾಟಿಸಲಿದ್ದಾರೆ
ಖ್ಯಾತ ಎಲಬು ತಜ್ಞರಾದ
ಡಾ. ಸಂತೋಷ್ ಬಾಬು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ ಪೂಜಾರಿ, ಉದ್ಯಮಿ ಓಂಪ್ರಸಾದ್ ಬಾರ್ದಿಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ
ಸಮುದಾಯ ಹಾಗೂ ಸಂಘಟನೆ ಎಂಬ ವಿಚಾರದ ಬಗ್ಗೆ ಆಪ್ತ ಸಮಾಲೋಚಕರಾದ ಸ್ಕಿತೇಶ್ ಎಸ್ ಬಾರ್ಯ ಉಪನ್ಯಾಸ ನೀಡಲಿದ್ದಾರೆ
ಬಳಿಕ‌ ನಡೆಯುವ ಸಮಾರೋಪ ಸಮಾರಂಭದಲ್ಲಿ ಮೂತ್ರ ರೋಗ ತಜ್ಞರಾದ
ಡಾ. ಸದಾನಂದ ಪೂಜಾರಿ, ಅಖಿಲ ಭಾರತ ಬಿಲ್ಲವರ ಯೂನಿಯಾನ್ ಅಧ್ಯಕ್ಷ ನವೀನ್‌ಚಂದ್ರ ಡಿ ಸುವರ್ಣ, ಕೆದ್ದೇಲುಗುತ್ತು
ಶ್ರೀ ನಾಲ್ಕೆತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿ, ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್‌, ಬಿರುವೆ‌ರ್ ಕುಡ್ಗ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಳ್ಳಾಲ್‌ ಭಾಗ್, ಉದ್ಯಮಿ ದಿನೇಶ್ ಎಂ.ಪಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಪತ್ರಕಾ ಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಕೋಶಾಧಿಕಾರಿ ಸುನೀಲ್ ಎನ್ ಕುಂದರ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್ ಶಂಬೂರು, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು